No menu items!
20.9 C
Munich
Friday, August 21, 2026

ಶಾಲೆಗಳ ಸುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ʼಗೆ ಬ್ರೇಕ್: ರಾಜ್ಯ ಸರ್ಕಾರದ ಆದೇಶ

Must read

ಶಾಲೆಗಳ ಸುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ʼಗೆ ಬ್ರೇಕ್: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಂಡಿರುವ ಸರ್ಕಾರ, ಶಾಲೆಗಳು ಹಾಗೂ ಪಿಯು ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದರು.
ಹೈ ಫ್ಯಾಟ್, ಹೈ ಶುಗರ್ ಹಾಗೂ ಹೈ ಸಾಲ್ಟ್ ಅಂಶಗಳನ್ನು ಹೊಂದಿರುವ ಆಹಾರ ಪದಾರ್ಥಗಳ ಮಾರಾಟಕ್ಕೆ ಇನ್ನು ಮುಂದೆ ಅವಕಾಶ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ರಾಜ್ಯದ 134 ಶಾಲೆಗಳಲ್ಲಿ ನಡೆಸಿದ ಸಮೀಕ್ಷೆಯ ಬಳಿಕ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಶಾಲೆಗಳ ಕ್ಯಾಂಟೀನ್ಗಳಿಗೂ ಇದೇ ನಿಯಮ ಅನ್ವಯವಾಗಲಿದೆ.
ನಿಯಮ ಉಲ್ಲಂಘಿಸಿ ಮಕ್ಕಳಿಗೆ ಜಂಕ್ ಫುಡ್ ಮಾರಾಟ ಮಾಡಿದ ಅಂಗಡಿಗಳು ಹಾಗೂ ಕ್ಯಾಂಟೀನ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಭಾರೀ ಪ್ರಮಾಣದ ದಂಡ ವಿಧಿಸುವುದರ ಜೊತೆಗೆ ಪರವಾನಗಿಯನ್ನೂ ರದ್ದುಪಡಿಸುವ ಎಚ್ಚರಿಕೆಯನ್ನು ಆಹಾರ ಸುರಕ್ಷತಾ ಇಲಾಖೆ ನೀಡಿದೆ.
ಈ ಕುರಿತು ಮಾತನಾಡಿದ ಸಚಿವ ಯು.ಟಿ. ಖಾದರ್, “ರೋಗ ಬಂದ ನಂತರ ಚಿಕಿತ್ಸೆ ನೀಡುವುದಕ್ಕಿಂತ ಮೊದಲು ಅದನ್ನು ತಡೆಗಟ್ಟುವುದು ಮುಖ್ಯ. ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಮಕ್ಕಳ ಆಹಾರ ಪದ್ಧತಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ನಾವು ಏನು ತಿನ್ನುತ್ತೇವೆಯೋ ಅದೇ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ. ಹೀಗಾಗಿ ಶಾಲೆ ಹಾಗೂ ಪಿಯು ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟವನ್ನು ನಿಷೇಧಿಸಲಾಗಿದೆ” ಎಂದು ಹೇಳಿದರು.
ಇತ್ತೀಚಿನ ಸಮೀಕ್ಷೆಯಲ್ಲಿ ಹಲವು ಶಾಲೆಗಳ ಕ್ಯಾಂಟೀನ್ಗಳಲ್ಲಿಯೇ ಜಂಕ್ ಫುಡ್ ಮಾರಾಟವಾಗುತ್ತಿರುವುದು ಬೆಳಕಿಗೆ ಬಂದಿದ್ದು, ಇದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಜಾರಿಗೊಳಿಸಲಾಗಿದೆ. ಪಿಯುಸಿ ಮಟ್ಟದವರೆಗಿನ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೂ ಈ ಆದೇಶ ಅನ್ವಯವಾಗಲಿದ್ದು, ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸುವುದಾಗಿ ಸಚಿವರು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article