ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದೆ. ಅನುಮಾನಸ್ಪದ ಸ್ಥಿತಿಯಲ್ಲಿ ಯುವತಿ ದೇಹ ಪತ್ತೆಯಾಗಿದೆ. ಇಂದು ಬೆಳಗ್ಗೆ ಉದ್ಯಾನದ ಸಿಬ್ಬಂದಿ ಇದನ್ನು ಗಮನಿಸಿ ಪೊಲೀಸರಿಗೆ ತಿಳಿಸಿದ್ದರು.

ಮೃತೆ 18ವರ್ಷದ ಸಂತೋಷಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಬೌರಿಂಗ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






