ಚಿಕ್ಕಮಗಳೂರಿನಲ್ಲಿ ಸನ್ನಿ ಲಿಯೋನ್, ದೀಪಿಕಾ , ವಿಜಯ್…!

Date:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಹೋಬಳಿಗೆ ಬಾಲಿವುಡ್ ನಟಿಯರಾದ ಸನ್ನಿಲಿಯೋನ್, ದೀಪಿಕಾ ಪಡುಕೋಣೆ ಮತ್ತು ತಮಿಳುನಟ ವಿಜಯ್ ಆಗಮಿಸುತ್ತಿದ್ದಾರೆ…!

ಈ ವಿಷಯ ನಿಮ್ಮ ಗಮನಕ್ಕೆ ಇಲ್ಲಿಯವರೆಗೆ ಬರಲೇ ಇಲ್ವಾ?ಛೇ ಅಂತ ಬೇಜಾರ್ ಮಾಡ್ಕೋ ಬೇಡಿ, ಹಾಗೆಯೇ ಎದ್ನೋ ಬಿದ್ನೋ ಅಂತ ಅವರನ್ನು ಭೇಟಿ ಮಾಡೋಕೆ ಹೋಗ್ಬೇಡಿ.


ಇದು ರಸ್ತೆ ಗುಂಡಿ ವಿರುದ್ಧ ಜನ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಭಟನೆ ನಡೆಸ್ತಿರೋ ರೀತಿ.
ಕಳಸ ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಚೆನ್ನಯ್ಯ ಮಾಡಿದ ರಸ್ತೆ ಮೂರೇ ತಿಂಗಳಿಗೆ ಅಡಿಯಷ್ಟು ಗುಂಡಿ ಬಿದ್ದು ಹಾಳಾಗಿ ಹೋಗಿದೆ. ಇದರಿಂದಾಗಿ ಸ್ಥಳೀಯರು ಈ ರೀತಿ ಆಕ್ರೋಶ ಹೊರಹಾಕಿದ್ದಾರೆ.


ಕಳಸ ಪಟ್ಟಣದ ಯುವಕರು ಗುಂಡಿ ಬಿದ್ದ ರಸ್ತೆಯನ್ನ ಸ್ವಿಮ್ಮಿಂಗ್ ಪೂಲ್ ನಂತೆ ಫೋಟೋಶಾಪ್‍ನಲ್ಲಿ ಎಡಿಟ್ ಮಾಡಿ ಎಂಜಿನಿಯರ್ ಹಾಗೂ ಕಂಟ್ರಾಕ್ಟರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುಂಡಿ ಬಿದ್ದ ರಸ್ತೆಯಲ್ಲಿ ದೀಪಿಕಾ ಪಡುಕೋಣೆ ಹಾಗೂ ಸನ್ನಿ ಲಿಯೋನ್‍ರನ್ನು ಕೂರಿಸಿ ಇಂದು ಬೆಳಗ್ಗೆ ಸನ್ನಿ ಹಾಗೂ ಪಡುಕೋಣೆ 10 ಗಂಟೆಗೆ ಈಜು ಕೊಳವನ್ನ ಉದ್ಘಾಟಿಸಲಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನ ಹರಿಬಿಟ್ಟಿದ್ದಾರೆ.


ಇದೇ ಈಜು ಕೊಳದ ಬಳಿ ತಮಿಳಿನ ಖ್ಯಾತ ನಟ ವಿಜಯ್ ಸೆಲ್ಫಿ ತೆಗೆದುಕೊಂಡಿರುವ ಫೋಟೋಗಳು ಕೂಡ ವಾಟ್ಸಾಪ್‍ನಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ವೈರಲ್ ಆಗಿದೆ.

 

ಮೂರು ತಿಂಗಳ ಹಿಂದೆ ಬಾಳೂರು ಹ್ಯಾಂಡ್‍ಪೋಸ್ಟ್ ನಿಂದ ಕಳಸಾದ ಅಂಬಾತೀರ್ಥ ಬಸ್ ನಿಲ್ದಾಣದವರೆಗೆ ನಿರ್ಮಿಸಿರೋ ರಸ್ತೆ ಇದಾಗಿದೆ. ಎರಡು ವರ್ಷ ನಿರ್ವಹಣೆಯ ಜವಾಬ್ದಾರಿ ಹೊತ್ತಿರೋ ಎಂಜಿನಿಯರ್ ಹಾಗೂ ಕಂಟ್ರಾಕ್ಟರ್ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳಿಯರು ಎಂಜಿನಿಯರ್ ಚೆನ್ನಯ್ಯ ಹಾಗೂ ಕಂಟ್ರಾಕ್ಟರ್ ಹಾಲಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ!

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ! ಬೆಂಗಳೂರು:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಜಾಗತಿಕವಾಗಿ...

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು ಭಾರತದಲ್ಲಿ ಪವಿತ್ರವೆಂದು ಪರಿಗಣಿಸಲ್ಪಡುವ ತುಳಸಿ...

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...