ಕನ್ನಡ ಕಡ್ಡಾಯಗೊಳಿಸಲು ಹೊಸ ಕಾನೂನು

Must read

ಕನ್ನಡ ಕಡ್ಡಾಯಗೊಳಿಸಲು ಅಧಿವೇಶನದಲ್ಲಿ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ರಾಜ್ಯದಲ್ಲಿ ಹಿಂದಿ ದಿವಸ್ ಆಚರಣೆ ಸರಿಯಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಕನ್ನಡ ಭಾಷೆ ಕಡ್ಡಾಯಕ್ಕೆ ಸರ್ಕಾರ ಮುಂದಾಗಬೇಕು ಎಂದು ಹಿಂದಿ ದಿವಸ್ ಆಚರಣೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಸದಸ್ಯರು ತೀವ್ರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರ ಕನ್ನಡ ರಕ್ಷಣೆಗೆ ಬದ್ಧವಾಗಿದ್ದು, ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕನ್ನಡ ಕಡ್ಡಾಯಗೊಳಿಸಲು ಹೊಸ ಕಾನುನು ಜಾರಿಗೆ ತರಲಾಗುವುದು, ಜೊತೆಗೆ ಕನ್ನಡದಲ್ಲೇ ಇಂಜಿನಿಯರಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article