ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೋಟಿ ಕಂಠ ಗಾಯನ

Date:

ಕನ್ನಡ ರಾಜ್ಯೋತ್ಸವ ನಿಮಿತ್ತ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಕನ್ನಡ ಗೀತೆಗಳನ್ನು ಹಾಡಿದರು.

ಮೈಸೂರು ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ನಾಡಗೀತೆ ಜೊತೆಗೆ ಉದಯವಾಗಲಿ ನಮ್ಮ ಚೆಲುವ ನಾಡು, ಕನ್ನಡ ಡಿಂಡಿಮ, ಹಚ್ಚೆವು ಕನ್ನಡದ ದೀಪ, ವಿಶ್ವ ವಿನೂತನ, ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹಾಡುಗಳನ್ನು ಹಾಡಿದರು.

ಕಾರ್ಯಕ್ರಮದಲ್ಲಿ ನಗರದ ನಾನಾ ಭಾಗಗಳಿಂದ ಆಗಮಿಸಿದ್ದ ನಾನಾ ಕನ್ನಡ ಸಂಘಟನೆಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಹಸ್ರಾರು ಸಂಖ್ಯೆಯಲ್ಲಿದ್ದ ಸಾರ್ವಜನಿಕರು ಸಹ ಕೋಟಿ ಕಂಠ ಗಾಯನಕ್ಕೆ ದನಿಗೂಡಿಸಿದರು.

ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಕಾರ್ಯಕ್ರಮಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡಿದ್ದರು. ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಕನ್ನಡ ಸಂಘಗಳ ಸದಸ್ಯರು ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಯಶಸ್ವಿಯಾಗಿ ಕಾರ್ಯಕ್ರಮ ನೆರವೇರಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ರಾಮದಾಸ್, ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಜಿಪಂ ಸಿಇಒ ಪೂರ್ಣಿಮಾ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹೇಮಂತ್ ಕುಮಾರ್, ಸಂಗೀತ ವಿವಿ ಕುಲಪತಿ ರವಿಕುಮಾರ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...