ಮತ್ತೊಂದು ರೈಲು ದುರಂತಕ್ಕೆ ಉತ್ತರ ಪ್ರದೇಶ ಸಾಕ್ಷಿಯಾಗಿದ್ದು, ಕಾನ್ಪುರ ಬಳಿ ಕಾನ್ಪುರ-ಸೀಲ್ದಾಹ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮವಾಗಿ ಇಬ್ಬರು ಸಾವನ್ನಪ್ಪಿದ್ದು, 50 ಜನರಿಗೆ ಗಾಯಗಳಾಗಿವೆ. ಇನ್ನು ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗ್ತಾ ಇದೆ. ಸುಮಾರು 15 ಬೋಗಿಗಳನ್ನೊಳಗೊಂಡಿದ್ದ ಕಾನ್ಪುರ-ಸೀಲ್ದಾಹ್ ಎಕ್ಸ್ ಪ್ರೆಸ್ ರೈಲು ಕಾನ್ಪುರದಿಂದ ಸುಮಾರು 70 ಕಿಮೀ ದೂರದವರೆಗೆ ಸಂಚರಿಸಿತ್ತು. ಇದೇ ವೇಳೆ ಮಾರ್ಗದ ಮಧ್ಯದಲ್ಲಿರುವ ರೈಲ್ವೇ ಸೇತುವೆ ದಾಟುತ್ತಿದ್ದಂತೆ ರೈಲು ಹಳಿ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ದುರಂತದಲ್ಲಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, 50 ಮಂದಿಗೆ ಗಾಯಗಳಾಗಿವೆ. ಈ ಪೈಕಿ 5 ಜನರ ಸ್ಥತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡಿರುವವರನ್ನು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಾ ಇದೆ. ಇಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಸಂಭವಿಸಿದ ದುರಂತಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲವಾದರೂ, ದಟ್ಟ ಮಂಜಿನಿಂದ ಹಳಿ ಸ್ಪಷ್ಟವಾಗಿ ಘೋಚರಿಸುತ್ತಿರಲಿಲ್ಲ ಎಂದು ಪ್ರಯಾಣಿಕರು ಹೇಳಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಧಳ ಹಾಗೂ ಭದ್ರತಾ ಸಿಬ್ಬಂಧಿಗಳು ಆಗಮಿಸಿದ್ದು ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ. ದುರಂತ ನಡೆದ ಮಾರ್ಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ದುರಂತ ಕುರಿತು ಸಂಪೂರ್ಣ ತನಿಖೆ ನಡೆಸಬೇಕು ಎಂದು ರೈಲ್ವೇ ವಕ್ತಾರ ಅನೀಲ್ ಸಕ್ಸೆನಾ ಆದೇಶ ನೀಡಿದ್ದಾರೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಉಪೇಂದ್ರ ಹಾಗೂ ಯಶ್ ಬಗ್ಗೆ ಹಂಸಲೇಖ ಹೇಳಿದ್ದಾದ್ರೂ ಏನು..?
ನಿನ್ನ ಬರುವಿಕೆಯ ನಿರೀಕ್ಷೆಯಲ್ಲಿ ಈ ಪುಟ್ಟ ಹೃದಯ…!! Real Love Story
ಜನವರಿಯಿಂದ ಜಿಯೋ ಫ್ರೀ ಇಂಟರ್‍ನೆಟ್ ಕ್ಯಾನ್ಸಲ್..?!!
ಬ್ಯಾಂಕ್ ಜೊತೆ ಬ್ಯುಸಿನೆಸ್ ಮಾಡಲು ಅವಕಾಶ, ಪ್ರತಿ ತಿಂಗಳು 30,000 ತನಕ ಆದಾಯ
ಉತ್ತರ ಕೊರಿಯಾದಲ್ಲಿ ಕ್ರಿಸ್ಮಸ್ ಆಚರಿಸುವಂತಿಲ್ಲ..! ಅದರ ಬದಲು ಏನು ಮಾಡ್ಬೇಕು ಗೊತ್ತಾ..?
ಶಮಿ ಪತ್ನಿಯ ಡ್ರೆಸ್ ಬಗ್ಗೆ ಟೀಕೆ, ಟೀಕಾಕಾರರಿಗೆ ನಾಚಿಕೆಯಾಗಬೇಕು : ಮಹಮ್ಮದ್ ಕೈಫ್