ಕನ್ನಡಿಗರಿಗೆ ಉದ್ಯೋಗವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಕನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‍ನಲ್ಲಿ ಇಬ್ಬರು ಕರವೇ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ತಾಲ್ಲೂಕಿನ ಗಿಣಗೇರ ಗ್ರಾಮದಲ್ಲಿರುವ ಕಲ್ಯಾಣಿ ಸ್ಟೀಲ್ ಕಾರ್ಖಾನೆಯಲ್ಲಿ ಕನ್ನಡಿಗರಿಗೆ ಶೇ. 70ರಷು ಉದ್ಯೋಗ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ವಿಜಯಕುಮಾರ್ ಹಾಗೂ ಅವರ ಬೆಂಬಲಿಗನಿಗೆ ಗಂಭಿರವಾಗಿ ಗಾಯಗಳಾಗಿದ್ದು ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಪೊಲೀಸರ ಲಾಠಿಚಾರ್ಜ್‍ನಿಂದ ಮತ್ತೆ ಆಕ್ರೋಶಗೊಂಡ ಕರವೇ ಕಾರ್ಯಕರ್ತರು ಕಾರ್ಖಾನೆ ಮುಂದೆ ತೀವ್ರತರವಾದ ಪ್ರತಿಭಟನೆ ನಡೆಸಿದ್ದಾರೆ.
Like us on Facebook The New India Times
POPULAR STORIES :
“ಅಣ್ಣಾ ಕಿಸಾನ್ ಬಾಬುರಾವ್ ಹಜಾರೆ” ಈ ಬಾರಿಯ ಕಪಿಲ್ ಶರ್ಮಾ ಶೋನಲ್ಲಿ..!
ಇಂಡಿಯನ್ ಕ್ರಿಕೆಟ್ ಟೀಮ್ ಸ್ಟಾರ್ ಪ್ಲೇಯರ್ಸ್‍ನ ಹಿಂದಿನ ಅರಮನೆಗಳು ಹೇಗಿದ್ದವು ಗೊತ್ತಾ…?
ಪೆಪ್ಸಿ ಆ್ಯಡ್‍ನಲ್ಲಿ ವಿರಾಟ್‍ನ ದ್ವಂದ್ವ ನಿಲುವು..!
ಜಿಯೋ ಎಫೆಕ್ಟ್: ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಉಚಿತ ಅನ್‍ಲಿಮಿಟೆಡ್ ವಾಯ್ಸ್ ಕಾಲ್..!
ಆನ್‍ಲೈನ್ ಶಾಪಿಂಗ್ ಮಾಡೋಕು ಮುನ್ನ ಈ ಸ್ಟೋರಿ ಓದಿ..!
ನಿಮಗೆ ಗೊತ್ತಾ ವಾಟ್ಸಾಪ್‍ಗಿಂತ ‘ಅಲ್ಲೋ ಆಪ್’ ಸಖತ್ ಡಿಫರೆಂಟ್ ಆಗಿದೆ..!