ಕಾಂಪೌಂಡ್ ಕುಸಿದು ಅವಘಡ: ಕಾರ್ಮಿಕನೋರ್ವ SPOT DEATH!
ಬೆಂಗಳೂರು:- ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕನೋರ್ವ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಜರುಗಿದೆ.
ಮೃತ ದುರ್ದೈವಿಯನ್ನು 24 ವರ್ಷದ ಪರಶುರಾಮ್ ಎಂದು ಗುರುತಿಸಲಾಗಿದೆ. ಪೈಪ್ ಲೈನ್ ಹಾಕಲು ಮಣ್ಣು ತೆಗೆಯುತ್ತಿದ್ದ ವೇಳೆ ಕೌಂಪೌಂಡ್ ಕುಸಿದು ಅವಘಡ ಸಂಭವಿಸಿದೆ. ಕಾಂಪೌಂಡ್ ಗೋಡೆ ಪಕ್ಕದಲ್ಲಿಯೇ ಗುಂಡಿ ತೆಗೆಯುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಹೊಟ್ಟೆ ಪಾಡಿಗೆ ಬೆಂಗಳೂರಿಗೆ ಬಂದಿದ್ದ ರಾಯಚೂರು ಮೂಲದ ಐದಾರು ಮಂದಿ ಮಣ್ಣು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕಾರ್ಮಿಕ ಮೇಲೆಯೇ ಗೋಡೆ ಕುಸಿದಿದೆ.
ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.