ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ವಿಜಯ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ.
ನಿನ್ನೆ ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ವಿಜಯ್ ಕುಮಾರ್ ಅವರಯ ಹೃದಯಾಘಾತದಿಂದ ಕುಸಿದು ಬಿದ್ದರು. ಕೂಡಲೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಮಾರು ರಾತ್ರಿ 1 ಗಂಟೆಗೆ ವಿಧಿವಶರಾಗಿದ್ದಾರೆ.
ಇವರ ಅಕಾಲಿಕ ಸಾವಿನಿಂದಾಗಿ ಜಯನಗರ ಕ್ಷೇತ್ರದ ಚುನಾವಣೆ ಮಾತ್ರ ಮುಂದೂಡಲ್ಪಟ್ಟಿದೆ. ಉಖಿದ ಕ್ಷೇತ್ರಗಳ ಚುನಾವಣೆ ನಿಗಧಿಯಂತೆ ಮೇ 12ಕ್ಕೆ ನಡೆಯಲಿದೆ.