ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ನಿಗಧಿಯಾಗಿದೆ. ಮೇ 12 ರಂದು ಚುನಾವಣೆ ನಡೆಯಲಿದ್ದು ಮೇ 15ಕ್ಕೆ ಫಲಿತಾಂಶ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ ಏಪ್ರಿಲ್ 24, ನಾಮಪತ್ರ ಹಿಂಪಡೆಯಲು ಕೊನೆಯ ದಿನ ಏಪ್ರಿಲ್ 27.
ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿತು. ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ಚುನಾವಣಾ ದಿನಾಂಕವನ್ನು ಪ್ರಕಟಿಸಿದರು.
ಒಟ್ಟು 4.96 ಕೋಟಿ ಮತದಾರರಿದ್ದಾರೆ. 56696 ಮತದಾನ ಕೇಂದ್ರಗಳಲ್ಲಿ ಮತದಾನ ನಡೆಯಲಿವೆ. ಅಂಗವಿಕಲ ಸ್ನೇಹಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.
30 ದಿನದೊಳಗೆ ಅಭ್ಯರ್ಥಿಗಳು ವಿವರ ನೀಡಬೇಕು. ರಾಜಕೀಯ ಪಕ್ಷಗಳು 75 ದಿನದಲ್ಲಿ ವಿವರ ನೀಡಬೇಕಿದೆ.
ಇವಿಎಂ ನಲ್ಲಿ ಅಭ್ಯರ್ಥಿಗಳ ಫೋಟೋ ಹಾಕಲಾಗುವುದು ಎಂದು ಅವರು ವಿವರಿಸಿದರು.
ಪ್ರಸಕ್ತ ಸರ್ಕಾರದ ಅವಧಿ ಮೇ 28ರವರೆಗೆ ಇರಲಿದೆ.