No menu items!
22.4 C
Munich
Monday, August 17, 2026

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ

Must read

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ತಿರುವನಂತಪುರಂನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಅವರಿಗೆ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಒಟ್ಟು 20 ಮಂದಿ ಸಚಿವರೂ ಪ್ರಮಾಣವಚನ ಸ್ವೀಕರಿಸಿ ನೂತನ ಸಚಿವ ಸಂಪುಟ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದೆ.
ಇತ್ತೀಚೆಗೆ ನಡೆದ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ ರಚನೆಗೆ ಮುಂದಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ.
ನೂತನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಪಕ್ಷದಿಂದ 11 ಮಂದಿಗೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ಐವರು ಸಚಿವರಾಗಿದ್ದಾರೆ. ಉಳಿದಂತೆ ಕೇರಳ ಕಾಂಗ್ರೆಸ್ (ಜೋಸೆಫ್)ನ ಮಾನ್ಸ್ ಜೋಸೆಫ್, ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಶಿಬು ಬೇಬಿ ಜಾನ್, ಕೇರಳ ಕಾಂಗ್ರೆಸ್ (ಜಾಕೋಬ್)ನ ಅನೂಪ್ ಜಾಕೋಬ್ ಹಾಗೂ ಸಿಪಿ ಜಾನ್ ಅವರಿಗೂ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.
ಕಾಂಗ್ರೆಸ್ ಪಕ್ಷದಿಂದ ಸಚಿವ ಸ್ಥಾನ ಪಡೆದವರಲ್ಲಿ ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ. ಮುರಳೀಧರನ್, ಎ.ಪಿ. ಅನಿಲ್ ಕುಮಾರ್, ಪಿ.ಸಿ. ವಿಷ್ಣುನಾಥ್, ರೋಜಿ ಎಂ. ಜಾನ್, ಬಿಂದು ಕೃಷ್ಣ, ಎಂ. ಲಿಜು, ಟಿ. ಸಿದ್ದಿಕ್, ಕೆ.ಎ. ತುಳಸಿ ಮತ್ತು ಓ.ಜೆ. ಜನೀಶ್ ಸೇರಿದ್ದಾರೆ.

- Advertisement -spot_img

More articles

- Advertisement -spot_img

Latest article