ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ನೀಡಿದ್ದಾರೆ. ಭೇಟಿ ವೇಳೆ ಏರ್ಪೋರ್ಟ್ನಲ್ಲಿ ಪ್ರತಿಷ್ಠಾಪನೆ ಆಗಲಿರೋ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆ ಕಾಮಗಾರಿಯನ್ನು ಶ್ರೀಗಳು ಪರಿಶೀಲಿಸಿದ್ದು, ಕೆಲವೊಂದು ಸಲಹೆ ಮತ್ತು ಸೂಚನೆಗಳನ್ನೂ ಅಧಿಕಾರಿಗಳಿಗೆ ಈ ವೇಳೆ ನೀಡಿದರು. ಬಳಿಕ ಅಧಿಕಾರಿಗಳ ಜೊತೆ ಕಾಮಗಾರಿ ಸಂಬಂಧ ಕೆಲವು ಸಮಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕೆಂಪೇಗೌಡ ಕಂಚಿನ ಪ್ರತಿಮೆ ಕಾಮಗಾರಿ ಪರಿಶೀಲನೆ
Date: