ನಾಡಪ್ರಭು ಕೆಂಪೇಗೌಡರ ಜಯಂತಿಯಲ್ಲಿ ಸಿಎಂ ಭಾಗಿ

0
44

ಬೆಂಗಳೂರು : ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ 513 ನೇ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಸರ್ಕಾರದಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಇಂದು ನಾಡಪ್ರಭು ಕೆಂಪೇಗೌಡರ ಜಯಂತಿ. ಬಹಳ ಸಂತೋಷದಿಂದ ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಕೆಂಪೇಗೌಡರು ಬೆಂಗಳೂರು ನಿರ್ಮಾಣದ ಜೊತೆಗೆ ಜನಸಾಮಾನ್ಯರಿಗಾಗಿ ಕೆರೆ, ಕಟ್ಟೆಗಳನ್ನು ಕಟ್ಟಿಸಿದ್ದಾರೆ, ಮರ ಗಿಡಗಳನ್ನು ಬೆಳೆಸಿದ್ದಾರೆ, ವ್ಯವಸಾಯಕ್ಕೆ ಹೆಚ್ಚು ಒತ್ತನ್ನು ನೀಡಿದ್ದರು. ಅವರು ಕಟ್ಟಿದ ಕೆರೆ ಕಟ್ಟೆಗಳನ್ನು, ಕಟ್ಟಡಗಳನ್ನು ಉಳಿಸುವ ಕಾರ್ಯ ಆಗಬೇಕು. ವ್ಯವಸಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಚಿವ ಆರ್ ಅಶೋಕ್, ಅಶ್ವಥ್ ನಾರಾಯಣ್, ಮುನಿರತ್ನ, ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಕೆಂಪೇಗೌಡ ಪ್ರಶಸ್ತಿಯ ಪುರಸ್ಕೃತರಾಗಿರುವ ಮಾಜಿ ಸಿಎಂ ಎಸ್ ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ನಾರಯಣಮೂರ್ತಿ ಅವರ ಪರವಾಗಿ ಪತ್ನಿ ಸುಧಾಮೂರ್ತಿ ಹಾಗೂ ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಪ್ರಶಸ್ತಿ ವಿತರಿಸಲಾಗಿದೆ.

 

 

 

 

ಕೆಂಪೇಗೌಡರು ಬೆಂಗಳೂರು ನಿರ್ಮಾಣದ ಜೊತೆಗೆ ಜನಸಾಮಾನ್ಯರಿಗಾಗಿ ಕೆರೆ, ಕಟ್ಟೆಗಳನ್ನು ಕಟ್ಟಿದ್ದಾರೆ, ಮರ ಗಿಡಗಳನ್ನು ಬೆಳೆಸಿದ್ದಾರೆ, ವ್ಯವಸಾಯಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಅವರು ಕಟ್ಟಿದ ಕೆರೆ ಕಟ್ಟೆಗಳು, ಕಟ್ಟಡಗಳನ್ನು ಉಳಿಸುವ ಕಾರ್ಯ ಆಗಬೇಕು. ವ್ಯವಸಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಚಿವ ಆರ್ ಅಶೋಕ್, ಅಶ್ವಥ್ನಾರಾಯಣ್, ಮುನಿರತ್ನ, ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಕೆಂಪೇಗೌಡ ಪ್ರಶಸ್ತಿಯ ಪುರಸ್ಕೃತರಾಗಿರುವ ಮಾಜಿ ಎಸ್ ಸಿಎಂ ಎಂ ಕೃಷ್ಣ,

LEAVE A REPLY

Please enter your comment!
Please enter your name here