ಕೆಂಪೇಗೌಡ ಕಂಚಿನ ಪ್ರತಿಮೆ ಕಾಮಗಾರಿ ಪರಿಶೀಲನೆ

0
43

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ನೀಡಿದ್ದಾರೆ. ಭೇಟಿ ವೇಳೆ ಏರ್​​ಪೋರ್ಟ್​ನಲ್ಲಿ ಪ್ರತಿಷ್ಠಾಪನೆ ಆಗಲಿರೋ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆ ಕಾಮಗಾರಿಯನ್ನು ಶ್ರೀಗಳು ಪರಿಶೀಲಿಸಿದ್ದು, ಕೆಲವೊಂದು ಸಲಹೆ ಮತ್ತು ಸೂಚನೆಗಳನ್ನೂ ಅಧಿಕಾರಿಗಳಿಗೆ ಈ ವೇಳೆ ನೀಡಿದರು. ಬಳಿಕ ಅಧಿಕಾರಿಗಳ ಜೊತೆ ಕಾಮಗಾರಿ ಸಂಬಂಧ ಕೆಲವು ಸಮಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here