ಪ್ರಧಾನಿ ನರೇಂದ್ರ ಮೋದಿ ಕೇರಳದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದು , 500 ಕೋಟಿ ಪರಿಹಾರ ಘೋಷಣೆ ಮಾಡಿದ್ದಾರೆ.
ಪ್ರವಾಹದಲ್ಲಿ ಮೃತ ಕುಟುಂಬಸ್ಥರಿಗೆ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ.
ವೈಮಾನಿಕ ಸಮೀಕ್ಷೆ ನಡೆಸಿದ ಮೋದಿ ಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಪಿ. ಸತಾಶಿವಂ ಮತ್ತು ಕೇಂದ್ರ ಪ್ರವಾಸ ಸಚಿವ ಕೆ.ಜೆ.ಆಲ್ಫೋನ್ಸ್ ಅವರಿಂದ ಪ್ರವಾಹಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡರು.
ನಿನ್ನೆ ಸಂಜೆಯೇ ತಿರುವನಂತಪುರಕ್ಕೆ ಬಂದಿಳಿದಿದ್ದ ಪ್ರಧಾನಿಯನ್ನು ಸಿಎಂ ಸ್ವಾಗತಿಸಿಕೊಂಡಿದ್ದರು. ವೈಮಾನಿಕ ಸಮೀಕ್ಷೆಗೂ ಮುನ್ನ ಮೋದಿ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಪ್ರಧಾನಿ ಸಭೆ ನಡೆಸಿದ್ದರು.
ಕೊಚ್ಚಿನ್ ನಿಂದ ವೈಮಾನಿಕ ಸಮೀಕ್ಷೆ ನಡೆಸಿದರು.
ಅತಿವೃಷ್ಟಿಯಿಂದಾಗಿ ಅಂದಾಜು 19,512 ಕೋಟಿ ರೂ.ನಷ್ಟವಾಗಿದ್ದು, ಪ್ರಧಾನ ಮಂತ್ರಿಗಳು ಕೂಡಲೇ 2 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿಕೊಳ್ಳಲಾಗಿತ್ತು. ಪ್ರಧಾನಿಗಳು ರಾಜ್ಯಕ್ಕೆ 500 ಕೋಟಿ ರೂ. ಪರಿಹಾರ ಘೋಷಿಸಿದ್ದಾರೆ.
.






