ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಜಟಾಪಟಿ ನಡೆದಿದ್ದು, ಆರ್.ವಿ.ದೇವರಾಜ್ ವರ್ಸಸ್ ಕೆಜಿಎಫ್ ಬಾಬು ಫೈಟ್ ಇದೀಗ ಕೆಪಿಸಿಸಿ ಅಧ್ಯಕ್ಷರ ಅಂಗಳಕ್ಕೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಆರ್ ವಿ ದೇವರಾಜ್ ದೂರು ನೀಡಿದ್ದು, ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಓಡಾಡುತ್ತಿದ್ದಾನೆ. ಇದರಿಂದ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಯಾಗುತ್ತಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ದೂರು ನೀಡಿದ್ಧಾರೆ. ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಈಗಾಗಲೇ ನಾನು ಎಚ್ಚರಿಕೆ ಕೊಟ್ಟಿದ್ದೇನೆ. ಕರೆಸಿ ಮಾತಾಡುತ್ತೇನೆ , ನೀವು ನಿಮ್ಮ ಪಾಡಿಗೆ ನೀವು ಕೆಲಸ ಮಾಡಿ. ಆತನ ಬಗ್ಗೆ ತಲೆಕೆಡಿಸಿಕೊಳ್ಳ ಬೇಡಿ ಎಂದು ಹೇಳಿ ಕಳಿಸಿದ್ಧಾರೆ ಎಂದು ತಿಳಿದು ಬಂದಿದೆ.