ಇಂದು ಕಾಂಗ್ರೆಸ್ ನಲ್ಲಿ ಇದ್ದೇನೆ ಮುಂದೆಯೂ ಕಾಂಗ್ರೆಸ್ ನಲ್ಲಿ ಇರುತ್ತೇನೆ

Must read

ನಾನು ಇಂದು ಕಾಂಗ್ರೆಸ್ ಪಕ್ಷದಲ್ಲಿದ್ದು, ಮುಂದೆಯೂ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತೇನೆ ಎಂದು ಕೆ ಹೆಚ್ ಮುನಿಯಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಣದೀಪ್ ಸುರ್ಜೇವಾಲ ನಮ್ಮ ಕುಟುಂಬದ ಸದಸ್ಯರಾಗಿ ಬಂದಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸುರ್ಜೇವಾಲ ಇಲ್ಲಿಗೆ ಬಂದಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಸುರ್ಜೇವಾಲ ತಂದೆಯ ಕಾಲದಿಂದ ನನ್ನ, ಅವರ ನಡುವೆ ವಿಶ್ವಾವಿದೆ ಎಂದು ಹೇಳಿದ್ದಾರೆ. ನನ್ನ ಎಲ್ಲಾ ವಿಚಾರಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್​ಗೆ ತಿಳಿಸಿದ್ದೇನೆ. ನಾನು ಇನ್ನೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ, ಮುಂದೆಯೂ ಇರುತ್ತೇನೆ. ಎಲ್ಲವೂ ಸಮಾಧಾನವಾಗಿ ನಡೆಯುತ್ತಿದೆ, ಬೇರೆ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article