No menu items!
18.8 C
Munich
Wednesday, September 30, 2026

ಕೆಎಲ್ ರಾಹುಲ್ ಟ್ರೇಡ್ ವದಂತಿ; ಡೆಲ್ಲಿ ಕ್ಯಾಪಿಟಲ್ಸ್ನಿಂದ ಬಂತು ಬಿಗ್ ಅಪ್ ಡೇಟ್!

Must read

ಕೆಎಲ್ ರಾಹುಲ್ ಟ್ರೇಡ್ ವದಂತಿ; ಡೆಲ್ಲಿ ಕ್ಯಾಪಿಟಲ್ಸ್ನಿಂದ ಬಂತು ಬಿಗ್ ಅಪ್ ಡೇಟ್!

ಇಂಡಿಯನ್ ಪ್ರೀಮಿಯರ್ ಲೀಗ್ನ ಮುಂದಿನ ಆವೃತ್ತಿ ಆರಂಭಕ್ಕೂ ಮುನ್ನ ಕೆಎಲ್ ರಾಹುಲ್ ತಂಡ ಬದಲಾಯಿಸಲಿದ್ದಾರೆ ಎಂಬ ವದಂತಿಗಳಿಗೆ ಇದೀಗ ತೆರೆ ಬಿದ್ದಿದೆ. ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದು ಕೋಲ್ಕತಾ ನೈಟ್ ರೈಡರ್ಸ್ ತಂಡ ಸೇರಲಿದ್ದಾರೆ ಎಂಬ ಸುದ್ದಿಗಳು ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಸಹ-ಮಾಲೀಕ ಪಾರ್ಥ್ ಜಿಂದಾಲ್ ಸ್ಪಷ್ಟನೆ ನೀಡಿದ್ದಾರೆ.
ಕೆಎಲ್ ರಾಹುಲ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮ್ಯಾನೇಜ್ಮೆಂಟ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಮಾತುಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಅದರಲ್ಲೂ ರಿಷಭ್ ಪಂತ್ ಮತ್ತೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳಿದ ಬಳಿಕ ರಾಹುಲ್ ಅವರನ್ನು ಬೇರೆ ಫ್ರಾಂಚೈಸಿಗೆ ಟ್ರೇಡ್ ಮಾಡಬಹುದು ಎಂಬ ಊಹಾಪೋಹಗಳು ಮತ್ತಷ್ಟು ಹೆಚ್ಚಾಗಿದ್ದವು.
ಆದರೆ ಈ ಎಲ್ಲಾ ವದಂತಿಗಳಿಗೆ ಪಾರ್ಥ್ ಜಿಂದಾಲ್ ತೆರೆ ಎಳೆದಿದ್ದಾರೆ. ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರರಾಗಿದ್ದು, ಮುಂದಿನ ದಿನಗಳಲ್ಲೂ ಅವರು ತಂಡದ ಭಾಗವಾಗಿಯೇ ಮುಂದುವರಿಯಲಿದ್ದಾರೆ ಎಂದು ಜಿಂದಾಲ್ ಸ್ಪಷ್ಟಪಡಿಸಿದ್ದಾರೆ.
“ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಪಾಲಿಗೆ ಕ್ಲಚ್ ಪ್ಲೇಯರ್. ನಾನು ಕಂಡ ಅತ್ಯಂತ ಪ್ರಾಮಾಣಿಕ ಆಟಗಾರರಲ್ಲಿ ಅವರೂ ಒಬ್ಬರು. ಅವರು ಯಾವಾಗಲೂ ವೈಯಕ್ತಿಕ ಹಿತಾಸಕ್ತಿಗಿಂತ ತಂಡದ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ನಮ್ಮ ನಡುವೆ ಇನ್ನೂ ಸಾಧಿಸಬೇಕಾದ ಕೆಲಸಗಳಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹೆಮ್ಮೆ ಪಡುವಂತೆ ಮಾಡಲು ನಾವೆಲ್ಲರೂ ಒಟ್ಟಾಗಿ ಶ್ರಮಿಸುತ್ತೇವೆ” ಎಂದು ಪಾರ್ಥ್ ಜಿಂದಾಲ್ ತಿಳಿಸಿದ್ದಾರೆ.
ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ತಂಡದೊಂದಿಗಿನ ಕೆಎಲ್ ರಾಹುಲ್ ಅವರ ಮುಂದುವರಿಕೆಯನ್ನು ಪರೋಕ್ಷವಾಗಿ ಸ್ಪಷ್ಟಪಡಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಜರ್ಸಿ ಧರಿಸಿದ್ದ ರಾಹುಲ್ ಅಭಿಮಾನಿಗಳನ್ನು ಉದ್ದೇಶಿಸಿ “ನಾನು ನನ್ನ ಮನೆಯಲ್ಲಿದ್ದೇನೆ” ಎಂಬ ಸಂದೇಶ ನೀಡಿದ್ದಾರೆ.
ಈ ಬೆಳವಣಿಗೆಯೊಂದಿಗೆ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡ ತೊರೆಯಲಿದ್ದಾರೆ ಎಂಬ ವದಂತಿಗಳಿಗೆ ಬ್ರೇಕ್ ಬಿದ್ದಿದೆ. ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಇಬ್ಬರೂ ಡೆಲ್ಲಿ ಕ್ಯಾಪಿಟಲ್ಸ್ ಪರ ಒಟ್ಟಿಗೆ ಕಣಕ್ಕಿಳಿಯುವ ನಿರೀಕ್ಷೆ ಮೂಡಿದೆ.

- Advertisement -spot_img

More articles

- Advertisement -spot_img

Latest article