ಶಾಲೆಗೆ ಹೋಗು ಎಂದಿದ್ದಕ್ಕೆ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ನಡೆದಿದೆ.
ಇಲ್ಲಿನ ಅಮೂಲ್ ದಾಸ್ ಎಂಬುವವರ ಮಗಳು ನ್ಯಾನ್ಸಿ (12) ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ.
7ನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಸರಿಯಾಗಿ ಶಾಲೆಗೆ ಹೋಗ್ತಾ ಇರಲಿಲ್ಲ. ಪೋಷಕರು ಶಾಲೆಗೆ ಹೋಗುವಂತೆ ಬೈದು ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಜಿಎಫ್ ನ ಚಾಂಪಿಯನ್ ರೀಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲೆಗೆ ಹೋಗೆಂದಿದ್ದಕ್ಕೇ ಆತ್ಮಹತ್ಯೆಗೆ ಶರಣಾದಳು…!
Date: