No menu items!
35.5 C
Munich
Friday, July 31, 2026

ಕೋಲಾರದಲ್ಲಿ ನೀರಿನ ಸಂಪ್ ಗೆ ಬಿದ್ದು 3 ವರ್ಷದ ಮಗು ದಾರುಣ ಸಾವು!

Must read

ಕೋಲಾರದಲ್ಲಿ ನೀರಿನ ಸಂಪ್ ಗೆ ಬಿದ್ದು 3 ವರ್ಷದ ಮಗು ದಾರುಣ ಸಾವು!

ಕೋಲಾರ: ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ಕೋಲಾರ ನಗರದಲ್ಲಿ ನಡೆದಿದೆ. ಈ ಘಟನೆ ಇಡೀ ಬಡಾವಣೆಯಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ.

ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯ 10ನೇ ಕ್ರಾಸ್‌ನಲ್ಲಿ ನಡೆದ ಈ ಘಟನೆಯಲ್ಲಿ ವಿಕಾಸ್ ಮತ್ತು ಹಂಸ ದಂಪತಿಯ ಪುತ್ರ ಯಶಸ್ (3) ಮೃತಪಟ್ಟಿದ್ದಾನೆ.

ಮನೆಯ ಮುಂದೆ ಆಟವಾಡುತ್ತಿದ್ದ ಯಶಸ್, ಆಕಸ್ಮಿಕವಾಗಿ ನೀರಿನ ಸಂಪ್ ಬಳಿ ತೆರಳಿದ್ದಾನೆ. ಈ ವೇಳೆ ಸಂಪ್‌ನ ಮುಚ್ಚಳ ಸರಿಯಾಗಿ ಮುಚ್ಚದಿದ್ದ ಕಾರಣ ಅಥವಾ ಕಾಲು ಜಾರಿ ಒಳಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಮಗು ಕಾಣಿಸದ ಹಿನ್ನೆಲೆಯಲ್ಲಿ ಪೋಷಕರು ಹಾಗೂ ಕುಟುಂಬದವರು ಹುಡುಕಾಟ ನಡೆಸಿದಾಗ, ಸಂಪ್‌ನೊಳಗೆ ಬಿದ್ದಿರುವುದು ಪತ್ತೆಯಾಗಿದೆ.ತಕ್ಷಣ ಸ್ಥಳೀಯರ ಸಹಾಯದಿಂದ ಮಗುವನ್ನು ನೀರಿನಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕಣ್ಣೆದುರೇ ಆಟವಾಡುತ್ತಿದ್ದ ಮಗುವನ್ನು ಕಳೆದುಕೊಂಡ ಪೋಷಕರ ದುಃಖ ಮುಗಿಲು ಮುಟ್ಟಿದ್ದು, ಅವರ ರೋದನ ಕಂಡು ಸ್ಥಳೀಯರು ಕೂಡ ಕಣ್ಣೀರಿಟ್ಟಿದ್ದಾರೆ. ಈ ದುರ್ಘಟನೆ ಕಾರಂಜಿಕಟ್ಟೆ ಬಡಾವಣೆಯ ನಿವಾಸಿಗಳನ್ನು ಬೆಚ್ಚಿಬೀಳಿಸಿದೆ.

ಘಟನೆ ಕುರಿತು ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ಹಾಗೂ ಘಟನೆಯ ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ.

- Advertisement -spot_img

More articles

- Advertisement -spot_img

Latest article