No menu items!
12.1 C
Munich
Saturday, May 2, 2026

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಿಸೈನ್!

Must read

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಿಸೈನ್!

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದ್ದರೂ, ಕಾಂಗ್ರೆಸ್ ಪಕ್ಷದ ಒಳಗಿರುವ ಬಂಡಾಯ ಮತ್ತು ಗೊಂದಲ ಇನ್ನೂ ಶಮನವಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ ಚುನಾವಣೆ ನಂತರವೂ ಮುಂದುವರಿದಿದೆ.

ಈ ಹಿನ್ನೆಲೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿದ್ದ ಹಾಗೂ ಎಂಎಲ್ಸಿಯೂ ಆಗಿರುವ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡದ ವಿಚಾರಕ್ಕೆ ಸಂಬಂಧಿಸಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಮತ್ತೊಂದು ಮುಸ್ಲಿಂ ಬಣ ಅಸಮಾಧಾನ ವ್ಯಕ್ತಪಡಿಸಿದೆ. ಜಮೀರ್ ಅಹ್ಮದ್ ಪ್ರಚಾರಕ್ಕೆ ಸಕ್ರಿಯವಾಗಿ ಭಾಗವಹಿಸಿಲ್ಲ ಮತ್ತು ಅವರ ನಡೆ ಪಕ್ಷದ ನಾಯಕರಿಗೆ ಸಮಾಧಾನಕರವಾಗಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇದೇ ವೇಳೆ ಜಮೀರ್ ಅಹ್ಮದ್ ಜೊತೆಗೆ ಅಬ್ದುಲ್ ಜಬ್ಬಾರ್ ಕೂಡ ಪ್ರಚಾರದಿಂದ ದೂರ ಉಳಿದಿದ್ದರು. ಪ್ರಚಾರದಲ್ಲಿ ಭಾಗವಹಿಸದ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಪಕ್ಷದೊಳಗೆ ಕೇಳಿಬಂದಿದೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜಬ್ಬಾರ್ ರಾಜೀನಾಮೆ ಸಲ್ಲಿಸಿದ್ದು, ಪಕ್ಷದೊಳಗಿನ ಅಸಮಾಧಾನ ಮತ್ತಷ್ಟು ತೀವ್ರಗೊಂಡಿದೆ. ಪ್ರಚಾರದಲ್ಲಿ ಭಾಗವಹಿಸದ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕಮಾಂಡ್‌ಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಉಪಚುನಾವಣೆಯ ಫಲಿತಾಂಶ ಹೊರಬಂದ ನಂತರ ಪಕ್ಷದೊಳಗಿನ ಅಸಮಾಧಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಜೊತೆಗೆ ಇತರ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳ ಮತ ಹಂಚಿಕೆಯ ಹಿನ್ನೆಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬುದರ ಮೇಲೂ ಗಮನ ಹರಿಸಲಾಗಿದೆ.

- Advertisement -spot_img

More articles

- Advertisement -spot_img

Latest article