No menu items!
17.9 C
Munich
Wednesday, July 8, 2026

KRSಗೆ ನೀರಿನ ಹರಿವು ಹೆಚ್ಚಳ: ಜಲಾಶಯದ ಮಟ್ಟ ಏರಿಕೆಯಿಂದ ರೈತರಲ್ಲಿ ಸಂತಸ

Must read

KRSಗೆ ನೀರಿನ ಹರಿವು ಹೆಚ್ಚಳ: ಜಲಾಶಯದ ಮಟ್ಟ ಏರಿಕೆಯಿಂದ ರೈತರಲ್ಲಿ ಸಂತಸ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವ ಪರಿಣಾಮ, ಕೃಷ್ಣರಾಜಸಾಗರ (ಕೆಆರ್ಎಸ್) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ನಿನ್ನೆಗೆ ಹೋಲಿಸಿದರೆ ಇಂದು ಜಲಾಶಯದ ಒಳಹರಿವು ಗಮನಾರ್ಹವಾಗಿ ಹೆಚ್ಚಾಗಿದ್ದು, ರೈತರಲ್ಲಿ ಆಶಾಭಾವನೆ ಮೂಡಿಸಿದೆ.
ಕಳೆದ ಕೆಲವು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೆಆರ್ಎಸ್ ಜಲಾಶಯಕ್ಕೆ ಸದ್ಯ 7,531 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನಿನ್ನೆ ಬೆಳಗ್ಗೆ 5,734 ಕ್ಯೂಸೆಕ್ ಇದ್ದ ಒಳಹರಿವು ಇಂದು ಮತ್ತಷ್ಟು ಏರಿಕೆಯಾಗಿದೆ.
124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್ಎಸ್ ಜಲಾಶಯದಲ್ಲಿ ಪ್ರಸ್ತುತ 81.55 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಒಟ್ಟು ನೀರು ಸಂಗ್ರಹ ಸಾಮರ್ಥ್ಯ 49.452 ಟಿಎಂಸಿ ಆಗಿದ್ದು, ಸದ್ಯ 12.485 ಟಿಎಂಸಿ ನೀರು ಶೇಖರಣೆಯಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಇದರಿಂದ ನೀರಾವರಿ ಹಾಗೂ ಕುಡಿಯುವ ನೀರಿನ ದೃಷ್ಟಿಯಿಂದ ರೈತರು ಮತ್ತು ಸಾರ್ವಜನಿಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ.

- Advertisement -spot_img

More articles

- Advertisement -spot_img

Latest article