No menu items!
20.8 C
Munich
Tuesday, August 11, 2026

ಬೆಂಗಳೂರು ಕಂಠೀರವ ಸ್ಟುಡಿಯೋ ಬಳಿ ಭೀಕರ ದುರಂತ; ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಸಾವು

Must read

ಬೆಂಗಳೂರು ಕಂಠೀರವ ಸ್ಟುಡಿಯೋ ಬಳಿ ಭೀಕರ ದುರಂತ; ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಸಾವು

ಬೆಂಗಳೂರು: ರಾಜಧಾನಿಯ ಕಂಠೀರವ ಸ್ಟುಡಿಯೋ ಮುಂಭಾಗ ಹಾಗೂ ಡಾ. ರಾಜ್ಕುಮಾರ್ ಪುಣ್ಯಭೂಮಿ ಬಳಿ ನಡೆಯುತ್ತಿದ್ದ ಅಂಡರ್ಪಾಸ್ ಕಾಮಗಾರಿ ವೇಳೆ ಭೀಕರ ದುರಂತ ಸಂಭವಿಸಿದೆ. ಕಾಮಗಾರಿಗಾಗಿ ತೋಡಲಾಗಿದ್ದ ಬೃಹತ್ ಗುಂಡಿಯ ಮಣ್ಣಿನ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಹಲವು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ.
ಅಂಡರ್ಪಾಸ್ ನಿರ್ಮಾಣಕ್ಕಾಗಿ ರಸ್ತೆಯಲ್ಲಿ ಸುಮಾರು 20 ಅಡಿ ಆಳದವರೆಗೆ ಮಣ್ಣು ತೋಡಲಾಗಿತ್ತು. ಎಂದಿನಂತೆ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಏಕಾಏಕಿ ಮೇಲಿನಿಂದ ಮಣ್ಣಿನ ತಡೆಗೋಡೆ ಕುಸಿದು ಬಿದ್ದಿದೆ.
ಮಣ್ಣು ಕುಸಿದ ವೇಳೆ ಸ್ಥಳದಲ್ಲಿದ್ದ ಐವರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡು ಉಸಿರಾಡಲಾಗದೆ ನರಳಾಡಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.
ಸಮಯಪ್ರಜ್ಞೆಯಿಂದ ಕಾರ್ಯಾಚರಣೆ ನಡೆಸಿ ಮಣ್ಣಿನಡಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಆದರೆ ಓರ್ವ ಕಾರ್ಮಿಕ ಇನ್ನೂ ಮಣ್ಣಿನಡಿ ಸಿಲುಕಿರುವ ಮಾಹಿತಿ ಲಭ್ಯವಾಗಿದ್ದು, ಅವರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದೆ.
ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಹೆಚ್ಚುವರಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಣ್ಣಿನಡಿ ಇನ್ನೂ ಯಾರಾದರೂ ಸಿಲುಕಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.
ದುರಂತಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -spot_img

More articles

- Advertisement -spot_img

Latest article