ಇಂದು ಮಧ್ಯಾಹ್ನ ದೋಸ್ತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತಿದೆ. ಇದೇ ವೇಳೆ ಸಿಎಂ ಕುಮಾರಸ್ವಾಮಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಜಯರಾಮ್ ಅವರಿಗೆ ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಜಯರಾಮ್ ರಾಜೀನಾಮೆಯಿಂದ ತೆರವಾಗುವ ಅಧ್ಯಕ್ಷ ಸ್ಥಾನವನ್ನು ಅಸಮಾಧಾನಿತ, ಬಂಡಾಯ ಶಾಸಕರಿಗೆ ನೀಡಲು ಸಿಎಂ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. ಆ ಮೂಲಕ ಬಂಡಾಯ ಶಮನಗೊಳಿಸಲು ಸಿಎಂ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.