No menu items!
20.9 C
Munich
Friday, August 21, 2026

KSRTC- ಜೀಪ್ ನಡುವೆ ಭೀಕರ ಅಪಘಾತ: ನಾಲ್ವರು ಸಾವು

Must read

ಮೈಸೂರು: ಹೊಸ ವರ್ಷದ ಸಂಭ್ರಮ ಮುಗಿಯೊಷ್ಟರಲ್ಲಿ ಅನಾಹುತಗಳು ಸಂಭವಿಸುತ್ತಲೇ ಇರುತ್ತದೆ. ಹೌದು ಇಂದು ಕೆಎಸ್‌ಆರ್‌ಟಿಸಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಚಾಲಕ ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದಲ್ಲಿ ನಡೆದಿದೆ.
ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ ಘಟನೆ ಸಂಭವಿಸಿದ್ದು, ಚಾಲಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೀಪ್ ಹೆಚ್‌ಡಿ ಕೋಟೆಯಿಂದ ಬರುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿದವರು ಕೂಲಿ ಕಾರ್ಮಿಕರು ಎಂಬ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -spot_img

More articles

- Advertisement -spot_img

Latest article