ಸಿಬ್ಬಂದಿಗಳಿಗೆ KSRTC ನಿಗಮದ MD ಅನ್ಬುಕುಮಾರ್ ಕೊಟ್ರು ಗುಡ್ ನ್ಯೂಸ್

Date:

ಸಿಬ್ಬಂದಿಗಳಿಗೆ ಇನ್ಮುಂದೆ ಪ್ರತಿ ತಿಂಗಳ 1ನೇ ತಾರೀಕಿನಂದೇ ವೇತನ ಪಾವತಿಯಾಗಲಿದೆ ಎಂದು KSRTC ನಿಗಮದ MD ಅನ್ಬುಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ಆದೇಶ ಹೊರಡಿಸಿರುವ ಅವರು, ಸಾರಿಗೆ ಸಂಸ್ಥೆಯ ಆತ್ಮವೇ ನಮ್ಮ ಕಾರ್ಮಿಕ ಬಂಧುಗಳು. ಅವರ ಕ್ಷೇಮಾಭಿವೃದ್ಧಿ, ಹಿತಾಸಕ್ತಿಯನ್ನು ಕಾಪಾಡುವ ಹಾಗೂ ಅವರ ಕಷ್ಟಗಳಿಗೆ ಸಕಾಲದಲ್ಲಿ ಸ್ಪಂದಿಸುವುದು ನಮ್ಮ ಆದ್ಯೆತೆಯಾಗಿದೆ. ಈ ನಿಟ್ಟಿನಲ್ಲಿ ಅಕ್ಟೋಬರ್ 2022ರ ತಿಂಗಳಿನಿಂದ ಪ್ರಪ್ರಥಮ ಬಾರಿಗೆ ಚಾಲಕ, ನಿರ್ವಾಹಕ, ತಾಂತ್ರಿಕ ಸಿಬ್ಬಂದಿಗಳು ಸೇರಿದಂತೆ ಸಮಸ್ತ ಸಿಬ್ಬಂದಿಗಳಿಗೆ ಪ್ರತಿ ತಿಂಗಳ ದಿನಾಂಕ 1ರಂದೇ ವೇತನವನ್ನು ಪಾವತಿ ಮಾಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

 

ಇನ್ನೂ ಈ ಕ್ರಮಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗಳ ವೇತನ ಬಿಲ್ಲುಗಳನ್ನು ತಯಾರಿಸುವಾಗ ಹಾಜರಾತಿ, ರಜೆ ಮಂಜೂರಾತಿ ಆದೇಶ, ಹೆಚ್ಚುವರಿ ಭತ್ಯೆ ಮುಂತಾದ ದಾಖಲಾತಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ವೇತನದ ಬಿಲ್ಲನ್ನು ಸಿದ್ದಪಡಿಸುವಂತೆ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...