ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಡೆಸಲಾಗುತ್ತಿರುವ ಮುಷ್ಕರ ಮಂಗಳವಾರವೂ ಮುಂದುವರೆದಿದ್ದು ಬಸ್‍ಗಳಿಲ್ಲದೇ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈಗಾಗಲೇ ವೇತನ ಪರಿಷ್ಕರಣೆಯ ಕುರಿತು ಸರ್ಕಾರ ಮೊಂಡು ಬುದ್ದಿ ತೋರಿಸುತ್ತಿದ್ದು 10 ರಿಂದ 12.5ಕ್ಕೆ ಏರಿಸಿದೆ. ಆದರೆ ಸಾರಿಗೆ ನೌಕರರು ತಮ್ಮ ಪಟ್ಟು ಬಿಡುತ್ತಿಲ್ಲ.
ಪ್ರಮುಖವಾಗಿ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಬಂದ್ ಬಿಸಿ ತಟ್ಟಿದ್ದು, ಕರಾವಳಿಗಳಲ್ಲಿ ಮಾತ್ರ ಎಂದಿನಂತೆ ಬಸ್ ಸಂಚಾರವಿತ್ತು. ಈ ಭಾಗಗಳಲ್ಲಿ ಸರ್ಕಾರೀ ಬಸ್‍ಗಳಿಗಿಂತ ಖಾಸಗೀ ಬಸ್‍ಗಳು ಹೆಚ್ಚಿರುವುದು ಇದಕ್ಕೆ ಕಾರಣ ಎನ್ನಲಾಗಿದೆ.
ಇನ್ನು, ಬೆಂಗಳೂರು ನಗರದಾದ್ಯಂತ ಬಂದ್‍ಗೆ ಬೆಂಬಲ ಸೂಚಿಸಿ ರಸ್ತೆಗಿಳಿಯದ ಬಿಎಂಟಿಸಿ ಬಸ್‍ಗಳಿಂದ ಖಾಸಗೀ ವಾಹನಗಳ ಹಾವಳಿ ಹೆಚ್ಚಾಗಿತ್ತು. ಅಲ್ಲದೇ ಪ್ರಯಾಣಿಕರಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಸನ್ನಿವೇಶಗಳೂ ಅಲ್ಲಲ್ಲಿ ಕಾಣಸಿಗುತ್ತಿತ್ತು.
ಬಂದ್‍ಗೆ ಸಕ್ರೀಯವಾಗಿ ಪಾಲ್ಗೊಳ್ಳದ ಸಾರಿಗೆ ಬಸ್‍ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಇಲಾಖೆಯ ನಾಲ್ಕು ವಿಭಾಗಗಳಿಗೆ ಕೇವಲ ಒಂದೇ ದಿನದಲ್ಲಿ ಬರೋಬ್ಬರಿ 17 ಕೋಟಿ ನಷ್ಟವಾಗಿದೆ ಎನ್ನಲಾಗಿದೆ. ಸುಮಾರು 150 ಬಸ್‍ಗಳ ಮೇಲೆ ನೆನ್ನೆ ಕಲ್ಲು ತೂರಾಟ ನಡೆಸಲಾಗಿತ್ತು
POPULAR STORIES :
ಗಂಡ ಹೆಂಡತಿ ಜಗಳಕ್ಕೆ ಹುಲಿಗೆ ಆಹಾರವಾದ ತಾಯಿ..!
ಕೃಷ್ಟ ಮೃಗ ಬೇಟೆ ಪ್ರಕರಣದಿಂದ ನಟ ಸಲ್ಮಾನ್ ನಿರಾಳ…!
ಮೇಷ್ಟ್ರೇ ನಮ್‍ಬಿಟ್ ಹೋಗ್ಬೇಡೀ…….Video
ಯೂಟ್ಯೂಬ್, ಫೇಸ್‍ಬುಕ್‍ನ್ನೇ ಹಿಂದಿಕ್ಕಿದ ಪೋಕಿಮನ್‍ಗೋ ಗೇಮ್..!!
ಬೋರ್‍ವೆಲ್ ಒಳಗೆ ಬಿದ್ದ ಬಾಲಕನ ಸಮೀಪದಲ್ಲೇ ಇದೆ ಹಾವು…!