ಬೆಂಗಳೂರು : ಬಿಜೆಪಿಯಲ್ಲಿ ವ್ಯಕ್ತಿ ಪೂಜೆ ಇಲ್ಲ, ಅದು ಇರುವುದು ಕಾಂಗ್ರೆಸ್ ನಲ್ಲಿ ಮಾತ್ರ ಎಂದು ಆರೋಗ್ಯ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜುಲೈ 28ಕ್ಕೆ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸಾಧನಾ ಸಮಾವೇಶ ಹಮ್ಮಿಕೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು ಮೂರು ವರ್ಷವಾಗುತ್ತಿದೆ. ಇವೆರಡನ್ನೂ ಇಟ್ಟುಕೊಂಡು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸರ್ಕಾರದ ಕಾರ್ಯಕ್ರಮದ ಫಲಾನುಭವಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುತ್ತಾರೆ. ಬಿಜೆಪಿಯಲ್ಲಿ ವ್ಯಕ್ತಿಪೂಜೆಯಿಲ್ಲ, ವ್ಯಕ್ತಿಪಲ್ಲಕ್ಕಿ, ವ್ಯಕ್ತಿ ಪ್ರತಿಷ್ಠೆಯಿಲ್ಲ, ಇಲ್ಲಿ ರಾಜ್ಯದ ದೇಶದ ಜನರ ಏಳಿಗೆಗಾಗಿ ಮಾಡುವ ಕಾರ್ಯಕ್ರಮವಿರುತ್ತದೆ. ದೇಶ ಮೊದಲು ಎರಡನೆಯದ್ದು ಪಕ್ಷ ಮೂರನೆಯದ್ದು ನಾನು ಎಂಬುದೇ ಬಿಜೆಪಿಯ ತತ್ವವಾಗಿದೆ. ಆದರೆ ಕಾಂಗ್ರೆಸ್ ನಲ್ಲಿ ಸಂಪೂರ್ಣ ವಿರುದ್ಧ ನಾನು, ನನ್ನ ಕುಟುಂಬ ಎಂಬುದಾಗಿರುತ್ತದೆ ಎಂದು ತಿಳಿಸಿದರು.
ಬಿಜೆಪಿಯಲ್ಲಿ ವ್ಯಕ್ತಿ ಪೂಜೆ ಇಲ್ಲ ….
Date: