ಬೆಂಗಳೂರು : ಬೆಂಗಳೂರಿನಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಬಲವಂತ ಮಾಡಿದ್ದ ವ್ಯಕ್ತಿಯೊಬ್ಬ ಅಶ್ಲೀಲ ಫೋಟೋ ತೆಗೆದು ಅವುಗಳನ್ನು ಸ್ನೇಹಿತರು ಮತ್ತು ಪತ್ನಿಯ ತಂದೆಗೆ ಕಳುಹಿಸಿದ್ದಾನೆ. ಇಂತಹ ಕೃತ್ಯವೆಸಗಿದ ಸಾಫ್ಟ್ ವೇರ್ ಉದ್ಯೋಗಿ ವಿರುದ್ಧ ಹೆಚ್ಚಿನ ತನಿಖೆ ಕೈಗೊಳ್ಳಲು ಹೈಕೋರ್ಟ್ ಆದೇಶಿಸಿದೆ. ಪ್ರಕರಣದ ಬಗ್ಗೆ ಪೊಲೀಸರು ಸಮರ್ಪಕವಾಗಿ ತನಿಖೆ ಕೈಗೊಂಡಿಲ್ಲವೆಂದು ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ ಹೆಚ್ಚಿನ ತನಿಖೆ ಕೈಗೊಳ್ಳಲು ಆದೇಶ ನೀಡಿದೆ.
ಸೈಕೊ ಗಂಡನಿಗೆ ಹೈಕೋರ್ಟ್ ಮಾಡಿದ್ದೇನು ?
Date: