ಲೋಹಿತಾಶ್ವ ಅವರ ಆರೋಗ್ಯ ಮತ್ತಷ್ಟು ಗಂಭೀರ

Date:

ಕನ್ನಡ ಚಿತ್ರರಂಗದ ಹಿರಿಯ ನಟ  ಲೋಹಿತಾಶ್ವ ಅವರ ಆರೋಗ್ಯ ಮತ್ತಷ್ಟು ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಅವರ ಪುತ್ರ ಶರತ್ ಬೆಂಗಳೂರಿನಲ್ಲಿ ಮಾಹಿತಿ ನೀಡಿದ್ದು, ಅಕ್ಟೋಬರ್ 4ರಂದು ನಮ್ಮ ತಂದೆಯನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದಂತ ನಂತ್ರ ಅವರು ಒಂದೆರಡು ದಿನ ಆರೋಗ್ಯ ಚೆನ್ನಾಗಿತ್ತು ಎಂದಿದ್ದಾರೆ. ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಸಂದರ್ಭದಲ್ಲಿಯೇ ನಮ್ಮ ತಂದೆಗೆ ಹೃದಯಾಘಾತ ಸಂಭವಿಸಿತ್ತು. ಅವರನ್ನು ಐಸಿಯುನಲ್ಲಿ ಇರಿಸಿ, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಿದ್ದಾರೆ. ಇನ್ನೂ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಗಂಭೀರವಾಗಿರುವ ಹಿನ್ನೆಲೆ ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಲೋಹಿತಾಶ್ವರನ್ನು ತೀವ್ರ ನಿಘಾ ಘಟಕದಲ್ಲಿರಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...