Lokayukta Raid: ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

tnit editors
1 Min Read

Lokayukta Raid: ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ಇಲಾಖೆಯ ಅಧಿಕಾರಿಗಳ ಮನೆ, ಕಚೇರಿ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.
ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಆ ಮೂಲಕ ಶಾಕ್ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಸದ್ಯ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದೆ. ಬೆಂಗಳೂರಿನಲ್ಲಿ ಐಎಎಸ್ ಸೇರಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾ ದಾಳಿ ಮಾಡಿದೆ.
ಆರ್.ಟಿ.ನಗರದಲ್ಲಿರುವ ಹಿರಿಯ IAS ಅಧಿಕಾರಿ ವಾಸಂತಿ ಅಮರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಆರೋಪ ಕೇಳಿಬಂದಿದೆ. ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸದ್ಯ ಇವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

Share This Article