love..ಲಿ ಬಳಗಕ್ಕೆ ಸೇರಿದ ‘ಬಿಜಲಿ ಪಟಾಕಿ’..

Date:

ಲವ್ ಲಿ ಚಿತ್ರತಂಡಕ್ಕೆ ಪಟ ಪಟಕ ಅಂತ ಮಾತಾಡಿ ಜನರನ್ನ ಮೋಡಿ ನಾಡಿದ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಎಂಟ್ರಿ ಕೊಟ್ಟಿದ್ದಾಳೆ . ಬಿಜಲಿ ಪಟಾಕಿ ಕಿರುತೆರೆ ರಿಯಾಲಿಟಿ ಶೋ ಮೂಲಕ ಜನ ಮನ ಗೆದ್ದಿರುವ ವಂಶಿಕಾ ಈಗ ಬೆಳ್ಳಿತೆರೆಗೂ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದ್ದಾಳೆ.

 

ಪ್ರತಿಭಾನ್ವಿತ ನಾಯಕ ಕಂ ಗಾಯಕ ವಸಿಷ್ಠ ಸಿಂಹ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ love..ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ಫಸ್ಟ್ ಲುಕ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರಕ್ಕೆ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಅಂಜನಿ ಕಶ್ಯಪ ಎಂಟ್ರಿ ಕೊಟ್ಟಿದ್ದಾಳೆ. ವಂಶಿಕಾ ತನು ಎಂಬ ಪ್ರಮುಖ ಪಾತ್ರದಲ್ಲಿ ನಟಿಸ್ತಿದ್ದು, ಬರುವ ಸೆಪ್ಟೆಂಬರ್ 6ರಿಂದ ವಂಶಿಕಾ ಭಾಗದ ಶೂಟಿಂಗ್ ಶುರುವಾಗಲಿದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆ ಪಾತ್ರ ಸೃಷ್ಟಿಸಿದ್ದು ಖಂಡಿತ ನೋಡುಗರನ್ನು ವಂಶಿಕಾ ಮನರಂಜನೆ ನೀಡುತ್ತಾಳೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕೇಶವ್.

ಈಗಾಗಲೇ ಸಿನಿಮಾದ 50% ಶೂಟಿಂಗ್ ಕಂಪ್ಲೀಟ್ ಆಗಿದೆ . ಆ್ಯಂಗ್ರಿ ಯಂಗ್ ಮ್ಯಾನ್ ವಸಿಷ್ಠ ಸಿಂಹನಿಗೆ ಜೋಡಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ನಾಯಕಿಯಾಗಿಯಾಗಿದ್ದಾರೆ .

ಮಫ್ತಿ ನಿರ್ದೇಶಕ ನರ್ತನ್‌ ಜೊತೆಗೆ ಕೆಲಸ ಮಾಡಿರುವ ಅನುಭವ ಇರುವ ಚೇತನ್‌ ಕೇಶವ್‌ ಈಗ ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಈ ಸಿನಿಮಾ ಮಾಡಲು ಹೊರಟಿದ್ದಾರೆ. ರೌಡಿಸಂ ಕಥೆ ಜೊತೆಗೆ ಆ್ಯಕ್ಷನ್‌ ರೋಮ್ಯಾಂಟಿಕ್‌ ಪ್ರೇಮ ಕಥಾಹಂದರ ಹೊಂದಿರುವ
ಈ ಚಿತ್ರವನ್ನು ರವೀಂದ್ರ ಕುಮಾರ್‌ ನಿರ್ಮಿಸುತ್ತಿದ್ದು, ಹರೀಶ್‌ ಕೊಮ್ಮೆ ಸಂಕಲನ, ಅಶ್ವಿನ್ ಕೆನಡಿ ಕ್ಯಾಮೆರಾ ಅನೂಪ್‌ ಸಿಳೀನ್‌ ಸಂಗೀತ ಸಂಯೋಜನೆ ಮಾಡಲಿದ್ದಾರೆ.

Share post:

Subscribe

spot_imgspot_img

Popular

More like this
Related

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ: ಡಿ.ಕೆ. ಶಿವಕುಮಾರ್

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ:...

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಬೆಂಗಳೂರು: ಬೆಂಗಳೂರು...

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...