ಎಂ ಬಿ ಪಾಟೀಲ್ ರಾಜೀನಾಮೆ?

admin
1 Min Read

ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಎಂ ಬಿ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಮೊದಲು ಬಿಡುಗಡೆ ಮಾಡಿದ್ದ ಸಚಿವರ ಪಟ್ಟಿಯಲ್ಲಿ ಸಚಿವ ಎಂ ಬಿ ಪಾಟೀಲ್ ಅವರ ಹೆಸರು ಇತ್ತು. ಆದರೆ, ಇಂದು ಪ್ರಮಾಣ ವಚನ ಸ್ವೀಕರಿಸುವ ಶಾಸಕರ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದ ಕಾರಣ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂದು ಹೇಳಲಾಗುತ್ತಿದೆ.


ಪಾಟೀಲ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಸದಾಶಿವನಗರದಲ್ಲಿನ ಅವರ ಮನೆಯ ಮುಂದೆ ಬೆಂಬಲಿಗರು ಪ್ರತಿಭಟನೆಗೆ ಮುಂದಾಗಿದ್ದರು. ಮನೆಯ ಮುಂದೆ ಪ್ರತಿಭಟನೆಗೆ ಅವಕಾಶ ನೀಡದ ಕಾರಣ ಗಾಂಧಿ ಪ್ರತಿಮೆ ಎದುರು ಪ್ರತಿಭಟಿಸಲು ಅಭಿಮಾನಿಗಳು ಮುಂದಾಗಿದ್ದಾರೆ.

Share This Article
Leave a Comment