ಸೋಮವಾರ ಮಧ್ಯಾಹ್ನ ನಡೆದ ಮಾಸ್ತಿಗುಡಿ ಸಿನಿಮಾ ಕ್ಲೈಮ್ಯಾಕ್ಸ್ ವೇಳೆ ನಡೆದ ದುರಂತದಲ್ಲಿ ಸ್ಯಾಂಡಲ್‍ವುಡ್‍ನ ಉದಯೋನ್ಮುಖ ಪ್ರತಿಭೆಗಳಾದ ಉದಯ್ ಮತ್ತು ಅನಿಲ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಹಿನ್ನಲೆಯಲ್ಲಿ ಮಾಸ್ತಿಗುಡಿ ಚಿತ್ರ ತಂಡದ ಪ್ರಮುಖ ಐವರ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.
ಮಾಸ್ತಿಗುಡಿ ಸಿನಿಮಾ ಕ್ಲೈಮ್ಯಾಕ್ಸ್ ವೇಳೆ ನಡೆದ ದುರಂತದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವ ಸಿನಿಮಾ ನಿರ್ದೇಶಕ ನಾಗಶೇಖರ್, ನಿರ್ಮಾಪಕ ಸುಂದರ್‍ಗೌಡ, ಸಾಹಸ ನಿರ್ದೇಶಕ ಡಾ. ರವಿವರ್ಮ, ಸಹಾಯಕ ನಿರ್ದೇಶಕ, ಹಾಗೂ ಯುನಿಟ್ ಮ್ಯಾನೇಜ್‍ಮೆಂಟ್‍ನ ಭರತ್ ವಿರುದ್ದ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 304, 185 ಹಾಗೂ ಸಹ ಕಾಲಂ 34ರ ಅಡಿಯಲ್ಲಿ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಇನ್ನು ನೆನ್ನೆ ನಡೆದ ದುರಂತದಲ್ಲಿ ಸಾವನ್ನಪ್ಪಿದ ಖಳ ನಟರಾದ ಉದಯ್ ಹಾಗೂ ಅನಿಲ್ ಮೃತ ದೇಹಕ್ಕಾಗಿ ಇಂದು ಸಹ ತೀವ್ರ ಶೋಧ ಕಾರ್ಯ ಮುಂದುವರೆದಿದ್ದು, ಶವ ಸಿಕ್ಕ ನಂತರ ಈ ಎಲ್ಲಾ ಪ್ರಮುಖ ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ..
Like us on Facebook The New India Times
POPULAR STORIES :
12 ವರ್ಷದ ಅಪ್ರಾಪ್ತ ಬಾಲಕನಿಂದ 18 ವರ್ಷದ ಯುವತಿ ತಾಯಿಯಾದ್ಲು..!
ವಿಲನ್ ಸಿನಿಮಾದ ಮತ್ತೊಂದು ಸ್ಪೆಷಾಲಿಟಿ ಏನ್ ಗೊತ್ತಾ..?
ಹಾಂಕಾಂಗ್ ಸ್ವಾತಂತ್ರ್ಯವನ್ನು ನಿರ್ಭಂಧಿಸುವ ಮಸೂದೆ ಅಂಗೀಕರಿಸಿದ ಚೀನಾ
ಇಂಡಿಯನ್ ಸ್ಟೀಲ್ ಮ್ಯಾನ್ ಸಾಹಸ ನೋಡುದ್ರೆ ಬೆಚ್ಚಿ ಬೀಳ್ತೀರ..!