ತಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ನಾನು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಸ್ಯಾಂಡಲ್‍ವುಡ್ ಸ್ಟಾರ್ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.
ಮಹದಾಯಿ ತೀರ್ಪು ವಿರೋಧಿಸಿ ಇಂದು ರಾಜ್ಯ ಕನ್ನಡ ಚಿತ್ರ ರಂಗದ ಹಲವಾರು ತಾರೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಅದರಲ್ಲಿ ಕಿಚ್ಚ ಸುದೀಪ್ ಸೇರಿದಂತೆ ಹಲವು ನಟರು ಪ್ರತಿಭಟನೆಯಿಂದ ದೂರ ಉಳಿದಿದ್ದರು.
ಈ ಕುರಿತು ಟ್ವಿಟರ್‍ನಲ್ಲಿ ಸ್ಪಷ್ಟನೆ ನೀಡಿರುವ ನಟ ಸುದೀಪ್ ತಂದೆ ಆನೋರೋಗ್ಯ ದಿಂದ ಬಳಲುತ್ತಿದ್ದ ಕಾರಣ ಅವರ ಯೋಗಕ್ಷೇಮ ವಿಚಾರಣೆಗೆ ನಾನು ಇರಲಾಬೇಕಾಯಿತು ಆದ್ದರಿಂದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.
ನ್ಯಾಯಾಧಿಕರಣ ತೀರ್ಪು ವಿರೋಧಿಸಿ ಇಂದು ಕರೆ ನೀಡಿದ್ದ ಬಂದ್‍ಗೆ ರಾಜ್ಯ ಚಲನಚಿತ್ರ ಮಂಡಳಿ ವ್ಯಾಪಕ ಬೆಂಬಲ ಸೂಚಿಸಿದ್ದು, ಅಧ್ಯಕ್ಷ ಸಾರಾ ಗೋವಿಂದು ಅವರ ನೇತೃತ್ವದಲ್ಲಿ ಹಲವಾರು ತಾರೆಯರ ತಂಡ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದೆ. ಪ್ರತಿಭಟನೆಯಲ್ಲಿ ಖ್ಯಾತ ನಟರಾದ ಶಿವರಾಜ್ ಕುಮಾರ್, ರಮೇಶ್, ನಟ ಯಶ್, ಗೋಲ್ಡನ್ ಸ್ಟಾರ್ ಗಣೇಶ್, ನಟ ಪ್ರಜ್ವಲ್ ದೇವರಾಜ್, ನಟ ಪಂಕಜ್, ನಟಿ ಹೇಮಾ ಚೌಧರಿ, ಚಿರಂಜೀವಿ ಸರ್ಜಾ, ರಂಗಾಯಣ ರಘು, ಶೃತಿ, ಜಗ್ಗೇಶ್, ಪೂಜಾಗಾಂಧಿ, ಸೇರಿದಂತೆ ಹಲವಾರು ತಾರೆಯರು ಭಾಗವಹಿಸಿದ್ದರು.
POPULAR STORIES :
ಅಬ್ಬಾ.. ಈ ವಿಡಿಯೋ ನೋಡಿದ್ರೆ ಕರಳು ಚುರುಕ್ ಅನ್ನತ್ತೆ..!
ಅರ್ನಬ್ ಗೋಸ್ವಾಮಿ ವಿರುದ್ದ 500 ಕೋಟಿ ರೂ ದಾವೆ ಹೂಡಿದ ಝಾಕೀರ್…!
ಮೊಬೈಲ್ ಫೋನ್ ಚಾರ್ಜ್ ಗೆ ಇಟ್ಟಿರುವಾಗ ಬ್ಲಾಸ್ಟ್ ಆಗಬಹುದು ಹುಷಾರ್…!
ಯಾಹೂ ಸಿಬ್ಬಂದಿಗಳಿಗೆ ಸಿ.ಇ.ಓ.ನ ಕೊನೆಯ ಪತ್ರ
ಸಲ್ಮಾನ್ ಗುಂಡು ಹಾರಿಸಿದ್ದು ನನ್ನ ಕಣ್ಣಾರೆ ನೋಡಿದ್ದೇನೆ: ಕೃಷ್ಣ ಮೃಗ ಬೇಟೆಯಲ್ಲಿ ಹೊಸ ಟ್ವಿಸ್ಟ್.
ಲೈಂಗಿಕ ಸಮಸ್ಯೆಗೆ ರಾಮಬಾಣ ದಾಳಿಂಬೆ ಹಣ್ಣಿನ ಜ್ಯೂಸ್….. !
ಇದ್ದಕ್ಕಿದ್ದ ಹಾಗೆ ಒಂದು ಹುಡುಗಿ ನಿಮ್ಮನ್ನು ತಬ್ಬಿಕೊಳ್ಳಲು ಬಂದಾಗ ನಿಮಗೆ ಏನ್ ಅನ್ಸಲ್ಲಾ ಹೇಳಿ..!
ಧೋನಿಯನ್ನು ಮಾಹೀ ಎಂದು ಕರೆದ ಮಗಳು ಜಿವಾ..! ಅಪ್ಪ ಮಗಳ ಕ್ಯೂಟ್ ವಿಡಿಯೋ..!