ಮಹಾಪರಿನಿರ್ವಾಣದ ದಿನದ ಪ್ರಯುಕ್ತ ಗೌರವ ನಮನ

Must read

ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಪಾಲಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಹಾಪರಿನಿರ್ವಾಣದ ದಿನದ ಪ್ರಯುಕ್ತ ಗೌರವ ನಮನ ಸಲ್ಲಿಸಲಾಯಿತು. ಪುರಭವನದ ಎದುರು ಇರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆಗೈಯ್ಯುವ ಮೂಲಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನ ಸ್ಮರಿಸಲಾಯ್ತು.

ಈ ವೇಳೆ ಮಾತ್ನಾಡಿದ ಮೇಯರ್ ಶಿವಕುಮಾರ್, ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು ಹಾಗೂ ಸಮಾನತೆಗಾಗಿ ಮತ್ತು ಶೋಷಿತ ವರ್ಗಗಳ ಹಕ್ಕಿಗಾಗಿ ಹೋರಾಡಿದ ಸಮಾಜ ಸುಧಾರಕರು. ಅವರು ತೋರಿಸಿದ ಸಮಾನತೆಯ ಹಾದಿಯಲ್ಲಿ ನಡೆಯುವುದೇ ನಾವು ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ತಿಳಿಸಿದರು.

ಈ ವೇಳೆ ಶಾಸಕ ಎಸ್.ಎ.ರಾಮದಾಸ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಶಿವಣ್ಣ, ಉಪಮೇಯರ್ ಡಾ.ಜಿ.ರೂಪಾ ಯೋಗೀಶ್, ಡಿಸಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಬಿ.ಆರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -spot_img

More articles

- Advertisement -spot_img

Latest article