ಐದು ಗಂಟೆಗಳಲ್ಲಿ 23 ಬಾರಿ ಹಾರ್ಟ್ ಅಟ್ಯಾಕ್ ಆಯ್ತು..! ಗಟ್ಟಿ ಜೀವದ ಆ ಮನುಷ್ಯ ಬದುಕುಳಿದುಬಿಟ್ಟ..!

1
63

ಇತ್ತೀಚಿನ ಜೀವನ ಶೈಲಿಯಿಂದಾಗಿ ಚಿಕ್ಕ ವಯಸ್ಸಿನಲ್ಲೇ ವಿಚಿತ್ರ ಕಾಯಿಲೆಗಳು ಬಂದು ವಕ್ಕರಿಸಿಕೊಳ್ಳುತ್ತವೆ. ಅದರಲ್ಲೂ ಹಾರ್ಟ್ ಅಟ್ಯಾಕ್ ಸಮಸ್ಯೆ ಕೂಡಾ ಒಂದು. ಆದ್ದರಿಂದ ಆಗಾಗ ಹಾರ್ಟ್ ಅಟ್ಯಾಕ್ ಆಗುವುದು ಸಾಮಾನ್ಯ. ಒಬ್ಬ ವ್ಯಕ್ತಿ ಎರಡ್ಮೂರು ಬಾರಿ ಹಾರ್ಟ್ ಅಟ್ಯಾಕ್ ಆಗುವುದು ಕೂಡಾ ಸಾಮಾನ್ಯವಾಗಿದೆ. ಆದರೆ ಅದಕ್ಕಿಂತ ಹೆಚ್ಚು ಬಾರಿ ಹಾರ್ಟ್ ಅಟ್ಯಾಕ್ ಆದರೆ ಆ ವ್ಯಕ್ತಿ ಬದುಕುಳಿಯುವುದು ಅನುಮಾನ. ಆದರೆ ಇಲ್ಲೋರ್ವ ವ್ಯಕ್ತಿಗೆ ಕೇವಲ 5 ಗಂಟೆಗಳ ಅಂತರದಲ್ಲಿ ಬರೋಬ್ಬರಿ 23 ಬಾರಿ ಹಾರ್ಟ್ ಅಟ್ಯಾಕ್ ಆಗಿದೆ..!
ಯೆಸ್.. ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಕೇರಳ ರಾಜ್ಯದ ಕೊಚ್ಚಿಯಲ್ಲಿ ಇಂಥದ್ದೊಂದು ವಿಚಿತ್ರ ಘಟನೆ ನಡೆದಿದೆ. 60 ವರ್ಷದ ವ್ಯಕ್ತಿಯೊಬ್ಬರಿಗೆ ಕೇವಲ ಐದೇ ಗಂಟೆಗಳ ಅಂತರದಲ್ಲಿ ಬರೋಬ್ಬರಿ 23 ಬಾರಿ ಹೃದಯಾಘಾತವಾಗಿದೆ. ಆದರೂ ವೈದ್ಯರ ಪ್ರಯತ್ನದಿಂದ ಅವರು ಬದುಕಿದ್ದಾರೆ. ಧೂಮಪಾನಿಯಾಗಿದ್ದ ಆ ವ್ಯಕ್ತಿ ಮೊಮ್ಮಗನೊಂದಿಗೆ ಕ್ರಿಕೆಟ್ ಆಡುತ್ತಿದ್ದ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪರೀಕ್ಷಿಸಿದ ವೈದ್ಯರಿಗೆ ಹೃದಯಾಘಾತವಾಗಿರುವುದು ಗೊತ್ತಾಗಿ ಚಿಕಿತ್ಸೆ ನೀಡಿದ್ದಾರೆ.
ಚಿಕಿತ್ಸೆ ನೀಡುತ್ತಿದ್ದ ಸಂದರ್ಭದಲ್ಲಿಯೇ ಅವರಿಗೆ ಮತ್ತೆ ಮತ್ತೆ ಹೃದಯಾಘಾತವಾಗುತ್ತಿತ್ತು. ಆದ್ದರಿಂದ ಆಸ್ಟರ್ ಮೆಡಿಸಿಟಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಹೃದ್ರೋಗ ತಜ್ಞ ಡಾ. ಅನಿಲ್ ಕುಮಾರ್ ಎಂಬುವವರ ನೇತೃತ್ವದ ತಂಡ ಚಿಕಿತ್ಸೆ ನೀಡಿದೆ. ಅವರಿಗೆ 5 ಗಂಟೆಗಳ ಅವಧಿಯಲ್ಲಿ 23 ಸಲ ಹೃದಯಾಘಾತವಾಗಿದ್ದರಿಂದ ಹೃದಯದ ಕೆಲಸವನ್ನು ಚಾಲನೆಯಲ್ಲಿಟ್ಟು ಅವರನ್ನು ಬದುಕಿಸಲಾಗಿದೆ. ಅವರೀಗ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ರೀತಿ ನಿರಂತರ ಹೃದಯಾಘಾತವಾಗುವುದು ಅಪರೂಪಗಳಲ್ಲಿ ಅಪರೂಪ ಎನ್ನಲಾಗುತ್ತಿದೆ..!

  • ರಾಜಶೇಖರ ಜೆ

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : [email protected]

POPULAR  STORIES :

ಶ್ರೀಲಂಕಾದಲ್ಲಿ ಭಾರತದ ಧ್ವಜ ಹಾರಿಸಿದ ಕನ್ನಡಿಗ ರಘು..!

ಸಿನಿಮಾಕಥೆಯಂತಿದ್ದರೂ ಇದು ಸಿನಿಮಾ ಸ್ಟೋರಿಯಲ್ಲ..! ಇದು ಇಂಡಿಯಾ, ಸ್ವೀಡನ್ ಲವ್ ಸ್ಟೋರಿ..!

ಇಲ್ಲಿ ಉಳಿದುಕೊಳ್ಳೋಕೆ ಬೇಕಾಗಿದ್ದನ್ನೆಲ್ಲಾ ಸರ್ಕಾರವೇ ಕೊಟ್ಟು, ಸಂಬಳವನ್ನೂ ನೀಡುತ್ತೆ..!

ಭಾರತದ ಅಗ್ರ ಸೆಲೆಬ್ರಿಟಿ ಯಾರು ಗೊತ್ತಾ..? ಟಾಪ್ 10 ಪಟ್ಟಿಯಲ್ಲಿದ್ದಾಳೆ ನಮ್ಮ ಕನ್ನಡತಿ..!

ಬಿಇಡ್ ಗೆ ಸೇರಿದ್ದು 12,800 ವಿದ್ಯಾರ್ಥಿಗಳು, ಪಾಸ್ ಆದವರು 20,000..! ಇದು ಡಾ. ಬಿ.ಆರ್ ಅಂಬೇಡ್ಕರ್ ಯೂನಿವರ್ಸಿಟಿಯ ಕರ್ಮಕಾಂಡ..!

ಈ ವ್ಯಕ್ತಿಗೆ ನಿದ್ದೆ ಮಾಡುವುದೇ ಮರೆತುಹೋಗಿದೆ..! 40 ವರ್ಷದಿಂದ ನಿದ್ದೆಯೇ ಮಾಡಿಲ್ವಂತೆ ಈ ಭೂಪ..!

ಸಲ್ಮಾನ್ ಖಾನ್ ನಿರಪರಾಧಿ..! ಹಾಗಾದರೆ ನಿಜವಾದ ಆಪರಾಧಿ ಯಾರು..?

ಇವರಿಗೆ 25 ವರ್ಷಗಳ ನಂತರ ಅಮ್ಮ ಸಿಕ್ಕಳು..! ಗೂಗಲ್ ಅರ್ಥ್ ಸಹಾಯದಿಂದ ತಾಯಿಯನ್ನು ಹುಡುಕಿದ ಮಗ..!

ಕೈ ಇಲ್ಲದ ಈ ಕ್ರಿಕೆಟಿರ್ ಗೂಗ್ಲೀ ಎಸೆಯುತ್ತಾನೆ..! ಸಿಕ್ಸರ್ ಸಿಡಿಸಿ ಮನೋರಂಜನೆ ಒದಗಿಸುತ್ತಾನೆ..!

1 COMMENT

LEAVE A REPLY

Please enter your comment!
Please enter your name here