ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಮಾನಸಿಕವಾಗಿ ನೊಂದು ನಡು ರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನಲ್ಲಿ ನಡೆದಿದೆ. ಚೆನ್ನೈನ ಜಿಎಸ್‍ಟಿ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು 39 ವರ್ಷದ ಆರ್.ಸರ್ಗುಣಂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಖಾಸಗೀ ಸಂಸ್ಥೆಯೊಂದರಲ್ಲಿ ಭದ್ರತಾ ಸಿಬ್ಬಂಧಿಯಾಗಿ ಕೆಲಸ ಮಾಡುತ್ತಿದ್ದ ಸರ್ಗುಣಂ ನಿನ್ನೆ ಸಂಜೆ 6.30ರ ಸುಮಾರಿಗೆ ಎಂಇಪಿಝೆಡ್ ಕೈಗಾರಿಕಾ ಪ್ರದೇಶದ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಕಿ ಹಚ್ಚಿಕೊಂಡಿದ್ದ ಆತನನ್ನು ಸ್ಥಳೀಯರ ಸಹಾಯದಿಂದ ಕೋಪ್ರೆಟ್ ಸರ್ಕಾರಿ ಆಸ್ಪತ್ರೆಗೆ ಸೇರಿಸಿಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸಾಯುವ ಮುನ್ನ ತಾನು ಮುಖ್ಯ ಮಂತ್ರಿ ಜಯಲಲಿತಾ ಅವರ ಅನಾರೋಗ್ಯದ ಸ್ಥಿತಿಯಿಂದ ತೀವ್ರವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಪೊಲೀಸ್ ಪೇದೆಯ ಬಳಿ ಹೇಳಿಕೊಂಡಿದ್ದಾನೆ. ಈ ಮಧ್ಯೆ ಮೃತ ಸರ್ಗುಣಂ ಎಐಡಿಎಂಕೆ ಪಕ್ಷದ ಕಾರ್ಯಕರ್ತನೂ ಅಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.
POPULAR STORIES :
ಪುಣೆಯಲ್ಲಿ ಭುಗಿಲೆದ್ದ ದಲಿತರು-ಮರಾಠರ ಸಂಘರ್ಷ..!
ವಿಷ ಕುಡಿದು ಆತ್ಮಹತ್ಯೆ ಯತ್ನಿಸುವ ನಾಟಕವಾಡಿದ ರೈತನ ವಿಡಿಯೋ ವೈರಲ್..!
ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್.. ಸ್ಪೀಡ್ ಕಳೆದುಕೊಳ್ಳುತ್ತಿದೆ ಜಿಯೋ ಸಿಮ್..!
ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಶ್ವಿನ್ ನಂ.1 ಬೌಲರ್..!
60 ಕೋಟಿ ಹರಾಜು ಕೂಗಿ ನಂಬರ್ ಪ್ಲೇಟ್ ಪಡೆದ ಭಾರತೀಯ ಉದ್ಯಮಿ..!
ಕಾಂಪೌಂಡ್ ವಿಚಾರವಾಗಿ ಎರಡು ಕುಟುಂಬಗಳ ಸಿನಿಮೀಯ ರೀತಿಯಲ್ಲಿ ಬಡಿದಾಟ..!
ಲಾರಿ ವಾಹನ ಚಾಲಕರ ದಿಢೀರ್ ಮುಷ್ಕರ: ಇಂದು ಪೆಟ್ರೋಲ್, ಡೀಸೆಲ್ ಸಿಗೋದು ಡೌಟ್..!