No menu items!
3.9 C
Munich
Wednesday, September 23, 2026

ಮಂಡ್ಯದಲ್ಲಿ ನಾಡಬಾಂಬ್ ಸ್ಪೋಟ: ಇಬ್ಬರು ಗಂಭೀರ, ಓರ್ವ ವಿದ್ಯಾರ್ಥಿಯ ಅಂಗೈ ಛಿದ್ರ!

Must read

ಮಂಡ್ಯ:- ಸಕ್ಕರೆನಾಡು ಮಂಡ್ಯದಲ್ಲಿ ನಾಡಬಾಂಬ್ ಸ್ಪೋಟ ಆಗಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಓರ್ವ ವಿದ್ಯಾರ್ಥಿಯ ಅಂಗೈ ಛಿದ್ರವಾಗಿರುವ ಘಟನೆ ಜರುಗಿದೆ.

ಈ ಘಟನೆ ತಾಲೂಕಿನ ಕಂಬದಹಳ್ಳಿಯ ಆಂಜನೇಯಬೆಟ್ಟದಲ್ಲಿ ಜರುಗಿದೆ. ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ತಿಳಿಯಲಾಗಿದ್ದು, ಜೈನ ಬಸದಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ ಸ್ವಚ್ಛಕಾರ್ಯಕ್ಕಾಗಿ ವಿದ್ಯಾರ್ಥಿಗಳು ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳು ಕಸದ ರಾಶಿಗೆ ಕೈ ಹಾಕಿದ್ದು, ಬಾಂಬ್ ಸ್ಫೋಟಗೊಂಡಿದೆ. ಕಾಡು ಹಂದಿ ಬೇಟೆಗಾಗಿ ನಾಡ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಕಿಡಿಗೇಡಿಗಳ ಕೆಲಸದಿಂದ ಅಮಾಯಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ ವಿದ್ಯಾರ್ಥಿಗಳಿನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಂಡಿಗನವಿಲೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -spot_img

More articles

- Advertisement -spot_img

Latest article