ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ.
ಪುತ್ತೂರು ತಾಲೂಕಿನ ಗುಂಡ್ಯಾ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಉದವೆ ಪ್ರದೇಶದಲ್ಲಿ ಮಳೆಯಿಂದಾಗಿ ರಸ್ತೆಯಲ್ಲಿ ನದಿ ನೀರು ಹರಿಯುತ್ತಿದ್ದು, ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಶಿಶಿಲೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ.