ಮ್ಯಾನ್ ಹೋಲ್ ನಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಬಂಡಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮಸುಂದರ ಪಾಳ್ಯದ ಎಚಿಡಿಸ್ ಅಪೋಲೋ ಅಪಾರ್ಟ್‍ಮೆಂಟ್‍ನಲ್ಲಿ ಘಟನೆ ನಡೆದಿದ್ದು, ಖಾಸಗಿ ಕಂಪನಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮೃತ ದುರ್ದೈವಿಗಳು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಓರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಮೃತರನ್ನು ಮಾದೇವಯ್ಯ, ನಾರಾಯಣಸ್ವಾಮಿ ಹಾಗೂ ಶ್ರೀನಿವಾಸ್ ಎಂದು ತಿಳಿದು ಬಂದಿದೆ.