ಮಂತ್ರಿ ಮಾಲ್ ಗೋಡೆ ಕುಸಿತ ನಾಲ್ವರಿಗೆ ಗಾಯ

admin
1 Min Read

ಬೆಂಗಳೂರಿನ ಪ್ರತಿಷ್ಠಿತ ಮಾಲ್‍ಗಳಲ್ಲಿ ಒಂದಾದ ಮಂತ್ರಿ ಮಾಲ್‍ನ ಹಿಂಬದಿ ಗೋಡೆ ಕುಸಿತಗೊಂಡ ಪರಿಣಾಮವಾಗಿ ನಾಲ್ವರು ಗಾಯಗೊಂಡಿರುವ ಘಟನೆ ಸೋಮವಾರ (ಇಂದು ಮಧ್ಯಾಹ್ನ) ಸಂಭವಿಸಿದೆ. ಇಂದು ಬೆಳಿಗ್ಗೆ ಎಂದಿನಂತೆ ಕಾರ್ಯ ನಿರ್ವಹಿಸುತ್ತಿದ್ದ ಮಂತ್ರಿ ಮಾಲ್ ಮಧ್ಯಾಹ್ನದ ವೇಳೆಗೆ ಹಿಂಬದಿಯ ಗೋಡೆ ಕುಸಿತ ಕಂಡಿದೆ. ಗೋಡೆ ಕುಸಿತಗೊಂಡ ರಭಸಕ್ಕೆ ಮಾಲ್‍ನಲ್ಲಿ ಹೌಸ್ ಕೀಪಿಂಕ್ ಕಾರ್ಯ ನಿರ್ವಹಿಸುತ್ತಿದ್ದ ಲಕ್ಷ್ಮಮ್ಮ ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಕೆ.ಸಿ ಜನರಲ್ ಹಾಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮಾಲ್‍ನಲ್ಲಿದ್ದ ಜನರನ್ನು ಹೊರಕ್ಕೆ ಕಳುಹಿಸಲಾಗಿದ್ದು, ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ.

ಘಟನೆಯ ಹಿನ್ನೆಲೆಯಲ್ಲಿ ಮಂತ್ರಿ ಮಾಲ್‍ನ ಮಲ್ಟಿಪ್ಲೆಕ್ಸ್ ನಲ್ಲಿ ಸಿನಿಮಾವನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದೆ. ಇಂದಿನ ಎಲ್ಲಾ ಸಿನಿಮಾ ಶೋಗಳನ್ನ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ತನ್ನ ಮುಂದೆ ನಗ್ನವಾಗಿ ಸ್ನಾನ ಮಾಡುವಂತೆ ಪೀಡಿಸುತ್ತಿದ್ದ ಕಾಮುಕ ಶಿಕ್ಷಕ ಅರೆಸ್ಟ್

2016ರಲ್ಲಿ ಸಾಮಾನ್ಯವಾಗಿ ಬಳಕೆಯಾದ ಪಾಸ್‍ವರ್ಡ್ ಯಾವುದು ಗೊತ್ತಾ.?

ವಿಶ್ವದ ಅರ್ಧದಷ್ಟು ಸಂಪತ್ತು ಈ ಎಂಟು ಜನರ ಪಾಲು..!!

ಡ್ರಾಪ್ ಕೊಡೋ ನೆಪದಲ್ಲಿ ಮಾನಸಿಕ ಅಸ್ವಸ್ಥೆಯನ್ನೆ ರೇಪ್ ಮಾಡಿದ ಪೊಲೀಸ್..!

ಬಾಯ್ ಫ್ರೆಂಡ್ ಇದಾರಾ..? ಹಾಗಿದ್ರೆ ಮಾತ್ರ ಕಾಲೇಜ್‍ಗೆ ಬನ್ನಿ..!

ಇರ್‍ರೆಸ್ಪಾನ್ಸಿಬಲ್ ಆಟಕ್ಕೆ ನನ್ ******* ಅಂದ ಪ್ರಥಮ್.!!

ಈ ವರ್ಷದಿಂದ ರಿಮೇಕ್ ಮಾಡಲ್ವಂತೆ ಕಿಚ್ಚ ಸುದೀಪ..?

ಸದ್ಯದಲ್ಲೆ ಬೆಂಗಳೂರಲ್ಲಿ ಪ್ರತ್ಯೇಕ ಸೈಬರ್ ಠಾಣೆ: ಪ್ರವೀಣ್ ಸೂದ್

ಸ್ಯಾಂಡಲ್‍ವುಡ್ ಮಿಸ್ಟರ್ ಪರ್ಫೆಕ್ಟ್ ಅಂತೆ ಈ ನಟ..!

Share This Article
Leave a Comment