ಪ್ರತಿಷ್ಠಿತ ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿ ಎಲ್ಲಾ ಮಾದರಿಯ ಕಾರುಗಳ ಬೆಲೆಯನ್ನು ಏರಿಸಿದೆ.
ತಯಾರಿಕ ವೆಚ್ಚದ ಹಿನ್ನೆಲೆಯಲ್ಲಿ ಕಾರುಗಳ ಬೆಲೆ ಏರಿಕೆ ಮಾಡಲಾಗಿರುವುದಾಗಿ ಕಂಪನಿ ತಿಳಿಸಿದೆ.
ನವದೆಹಲಿಯಲ್ಲಿ ಎಕ್ಸ್ ಶೋರೂಂ ಬೆಲೆಯಲ್ಲಿ ಸುಮಾರು 6100 ರೂ ಹೆಚ್ಚಳ ಆಗಿದೆ.
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿರುವ ಪರಿಣಾಮ ಕಾರು ತಯಾರಿಕ ಉಪಕರಣಗಳನ್ನು ಆಮದು ಮಾಡಿಕೊಳ್ಳಲು ಹೆಚ್ಚಿನ ವೆಚ್ಚ ಮಾಡಬೇಕಿರುವುದರಿಂದ ಬೆಲೆ ಏರಿಕೆ ಅನಿವಾರ್ಯ ಎಂದು ತಿಳಿದು ಬಂದಿದೆ.