ಸ್ಯಾಂಡಲ್ ವುಡ್ ಸ್ಟಾರ್ ನಿರ್ದೇಶಕರಿಂದ ‘ಮೇರಿ’ ಹವಾ

Date:

ಮನೋಜ್ ಪಿ ನಡಲುಮನೆ ‘ಆನ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಗುರುತಿಸಿಕೊಂಡಿದ್ದರು . ಈಗ ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಿದ್ದರಾಗಿದ್ದಾರೆ . ಈ ಚಿತ್ರಕ್ಕೆ ‘ಮೇರಿ’ ಎಂದು ಹೆಸರಿಡಲಾಗಿದೆ . ಮೇರಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಸಿಂಪಲ್ ಸುನಿ, ಅನೂಪ್ ಭಂಡಾರಿ, ಹೇಮಂತ್ ರಾವ್, ದಯಾನಂದ್ ಟಿ.ಕೆ. ಮಂಸೋರೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

‘ಮೇರಿ’ ಪಶ್ಚಿಮ ಘಟ್ಟದ ಗ್ರಾಮಾಂತರ ಠಾಣೆಯಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದೆ . ಥ್ರಿಲ್ಲರ್ ಡ್ರಾಮ ಸಬ್ಜೆಕ್ಟ್ ಇದಾಗಿದ್ದು , ವಿಕಾಶ್ ಉತ್ತಯ್ಯ, ಅನುಷ ಭಟ್, ಚೇತನ್ ವಿಕ್ಕಿ, ತೇಜಸ್ವಿನಿ ಶರ್ಮ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಮನೋಜ್ ಪಿ ನಡಲುಮನೆ ಅವರಿಗೆ ಎರಡನೇ ಸಿನಿಮಾ ಇದು. ‘ಮೇರಿ’ ಚಿತ್ರ ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಸದ್ಯದಲ್ಲೇ ಟ್ರೇಲರ್ ಮೂಲಕ ಪ್ರೇಕ್ಷಕರನ್ನು ಸೆಳೆಯಲು ಸಜ್ಜಾಗಿದೆ. ‘ಮೇರಿ’ ಪಕ್ಕಾ ಕಮರ್ಶಿಯಲ್ ಸಿನಿಮಾವಾಗಿದ್ದು, ಜನವರಿಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ.

ಸಂದೀಪ್ ನೀನಾಸಂ, ಭಾರ್ಗವ್ ವೆಂಕಟೇಶ್, ಸುಶಾಂತ್, ದೀಪಕ್ ಗೌಡ ಒಳಗೊಂಡ ಕಲಾವಿದರ ಬಳಗ ಚಿತ್ರದಲ್ಲಿದೆ. ವಿನೋದ್ ಭಾರತಿ ಛಾಯಾಗ್ರಹಣ, ಸೂರಜ್ ಜೋಯ್ಸ್ ಸಂಗೀತ ನಿರ್ದೇಶನ, ನಾಗೇಂದ್ರ ಉಜ್ಜನಿ ಸಂಕಲನ ಚಿತ್ರಕ್ಕಿದೆ. ರನ್ವಿತ್ ಶಿವಕುಮಾರ್, ಹರೀಶ್ ಜಿ.ಬಿ ನಿರ್ಮಾಣ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...