No menu items!
12.4 C
Munich
Friday, April 24, 2026

ಟ್ರಾಫಿಕ್ ಗೆ ಬ್ರೇಕ್ ಹಾಕಲು ಹೊಸ ಪ್ಲಾನ್! ಮೆಟ್ರೋ ಪ್ರಯಾಣಿಕ ಉದ್ಯೋಗಿಗಳಿಗೆ ₹2,000 ಇನ್ಸೆಂಟಿವ್

Must read

ಟ್ರಾಫಿಕ್ ಗೆ ಬ್ರೇಕ್ ಹಾಕಲು ಹೊಸ ಪ್ಲಾನ್! ಮೆಟ್ರೋ ಪ್ರಯಾಣಿಕ ಉದ್ಯೋಗಿಗಳಿಗೆ ₹2,000 ಇನ್ಸೆಂಟಿವ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನೇದಿನೇ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಚಾರ ದಟ್ಟಣೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಒಂದು ಕೋಟಿಗೂ ಅಧಿಕ ವಾಹನಗಳು ರಸ್ತೆಗಿಳಿಯುತ್ತಿರುವ ಹಿನ್ನೆಲೆ, ಬೆಂಗಳೂರು ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ಟ್ರಾಫಿಕ್ ಇರುವ ನಗರವೆಂಬ ಅಪಖ್ಯಾತಿಗೆ ಗುರಿಯಾಗಿದೆ.
ಈ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಖಾಸಗಿ ಕಂಪನಿಗಳು ಹೊಸ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿವೆ. ಅದರಲ್ಲಿ ಪ್ರಮುಖವಾಗಿ ಬಯೋಕಾನ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ವಿಶೇಷ ಪ್ರೋತ್ಸಾಹ ಯೋಜನೆಯನ್ನು ಘೋಷಿಸಿದೆ.
ನಗರದ ಟ್ರಾಫಿಕ್ ಒತ್ತಡ ಕಡಿಮೆ ಮಾಡುವ ಜೊತೆಗೆ ಉದ್ಯೋಗಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ತಲುಪುವಂತೆ ಮಾಡಲು, ವಾರದಲ್ಲಿ ಕನಿಷ್ಠ ಎರಡು ದಿನ ಸಾರ್ವಜನಿಕ ಸಾರಿಗೆ ಬಳಸುವಂತೆ ಬಯೋಕಾನ್ ತನ್ನ ಉದ್ಯೋಗಿಗಳಿಗೆ ಸೂಚಿಸಿದೆ. ಈ ನಿಯಮ ಪಾಲಿಸುವವರಿಗೆ ಸಂಬಳದ ಜೊತೆಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಪ್ರಾರಂಭಿಕ ಹಂತದಲ್ಲಿ 1,000 ಉದ್ಯೋಗಿಗಳಿಗೆ ಪ್ರತಿ ತಿಂಗಳು ₹2,000 ಮೌಲ್ಯದ ಮೆಟ್ರೋ ಪಾಸ್ ಅಥವಾ ಇನ್ಸೆಂಟಿವ್ ನೀಡಲು ಸಂಸ್ಥೆ ನಿರ್ಧರಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ, ಆರ್.ವಿ. ರಸ್ತೆದಿಂದ ಬೊಮ್ಮಸಂದ್ರವರೆಗೆ ಹಳದಿ ಮಾರ್ಗ ಮೆಟ್ರೋ ಕಾರ್ಯಾಚರಣೆ ಆರಂಭವಾದ ಬಳಿಕ ಈ ಭಾಗದಲ್ಲಿ ಟ್ರಾಫಿಕ್ ಒತ್ತಡ ಗಮನಾರ್ಹವಾಗಿ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ. ಇತರ ಐಟಿ-ಬಿಟಿ ಕಂಪನಿಗಳು ಕೂಡ ಇಂತಹ ಯೋಜನೆಗಳನ್ನು ಜಾರಿಗೆ ತರುವಂತೆ ಅವರು ಆಶಿಸಿದ್ದಾರೆ.
ಇದೇ ವೇಳೆ, ಪಬ್ಲಿಕ್ ಟ್ರಾನ್ಸ್ಪೋರ್ಟ್ ಬಳಕೆಯನ್ನು ಉತ್ತೇಜಿಸಲು ಕೆಲವು ಕಂಪನಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೂಡ ಜಾರಿಗೆ ತಂದಿವೆ. ಸ್ವಂತ ವಾಹನಗಳಲ್ಲಿ ಕಚೇರಿಗೆ ಬರುವ ಉದ್ಯೋಗಿಗಳಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಇದರ ಪರಿಣಾಮವಾಗಿ ಅನೇಕ ಟೆಕ್ಕಿಗಳು ಮೆಟ್ರೋ ಮತ್ತು ಬಿಎಂಟಿಸಿ ಬಸ್ಗಳನ್ನು ಆಯ್ಕೆ ಮಾಡುತ್ತಿದ್ದಾರೆ.
ಹಾಗೆಯೇ, ಒಂದೇ ಭಾಗದಿಂದ ಬರುವ ಉದ್ಯೋಗಿಗಳಿಗೆ ‘ಕಾರ್ ಪೂಲಿಂಗ್’ ವ್ಯವಸ್ಥೆಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಬಯೋಕಾನ್ ಸಂಸ್ಥೆಯ ಈ ಹೊಸ ಕ್ರಮ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮಾದರಿಯಾಗಿದ್ದು, ಇತರ ಕಂಪನಿಗಳು ಇದನ್ನು ಹೇಗೆ ಅನುಸರಿಸುತ್ತವೆ ಎಂಬುದು ಗಮನಾರ್ಹವಾಗಿದೆ.

- Advertisement -spot_img

More articles

- Advertisement -spot_img

Latest article