ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಬೆಟಗೇರಿಯ ನರಸಾಪೂರದ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಉಮೇಶ ಕಾಟವಾ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, BSS ಫೈನಾನ್ಸ್, ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ಸೇರಿದಂತೆ ಇತರೆ ಮೈಕ್ರೋ ಫೈನಾನ್ಸ್ ನಲ್ಲಿ ಸುಮಾರು ಒಂದೂವರೆ ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ರಾತ್ರಿ ಒಂಭತ್ತು ಘಂಟೆಯಾದ್ರೂ ಮನೆ ಕಡೆ ಬಂದು ಸಾಲ ಮರುಪಾವತಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತಿದ್ದರು. ಇದರಿಂದ ಬೇಸತ್ತು ಉಮೇಶ ಕಾಟವಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಬೆಟಗೇರಿ ಪೊಲೀಸರ ಭೇಟಿ ಪರಿಶೀಲನೆ ನಡಿಸಿದ್ದು, ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡಿದಿದೆ.