No menu items!
33 C
Munich
Friday, June 19, 2026

ನೂತನ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ನಲ್ಲಿ ಭಾರೀ ಕಸರತ್ತು; ಡಿಸಿಎಂ ಸ್ಥಾನಕ್ಕೆ ನಾಯಕರ ಮಧ್ಯೆ ಪೈಪೋಟಿ

Must read

ನೂತನ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ನಲ್ಲಿ ಭಾರೀ ಕಸರತ್ತು; ಡಿಸಿಎಂ ಸ್ಥಾನಕ್ಕೆ ನಾಯಕರ ಮಧ್ಯೆ ಪೈಪೋಟಿ

ಬೆಂಗಳೂರು: ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸಂಪುಟದಲ್ಲಿದ್ದ ಹಲವರಿಗೆ ಈ ಬಾರಿ ಅವಕಾಶ ಸಿಗುವ ಬಗ್ಗೆ ಅನಿಶ್ಚಿತತೆ ಎದುರಾಗಿದ್ದು, ಹೊಸ ಸಮೀಕರಣಗಳ ಆಧಾರದಲ್ಲಿ ಸಚಿವ ಸ್ಥಾನ ಹಂಚಿಕೆ ನಡೆಯುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ, ಹಿಂದಿನ ಸಂಪುಟದಲ್ಲಿದ್ದ ಸುಮಾರು 16 ಮಂದಿಗೆ ಈ ಬಾರಿ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆ ಇದ್ದು, 13 ಮಂದಿ ಮಾತ್ರ ಮತ್ತೆ ಸಚಿವರಾಗುವ ವಿಶ್ವಾಸದಲ್ಲಿದ್ದಾರೆ ಎನ್ನಲಾಗಿದೆ. ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಕೆ.ಜೆ. ಜಾರ್ಜ್, ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್, ಡಾ.ಜಿ. ಪರಮೇಶ್ವರ್, ಹೆಚ್.ಕೆ. ಪಾಟೀಲ್, ಶಿವರಾಜ್ ತಂಗಡಗಿ, ಕೆ.ಹೆಚ್. ಮುನಿಯಪ್ಪ, ಮಂಕಾಳ್ ವೈದ್ಯ, ಸಂತೋಷ್ ಲಾಡ್ ಹಾಗೂ ದಿನೇಶ್ ಗುಂಡೂರಾವ್ ಅವರ ಹೆಸರುಗಳು ಸಚಿವ ಸ್ಥಾನಕ್ಕೆ ಪ್ರಬಲವಾಗಿ ಕೇಳಿಬರುತ್ತಿವೆ.
ಇದೇ ವೇಳೆ, ರಾಜ್ಯ ರಾಜಕಾರಣದಲ್ಲಿ ನಾಲ್ಕು ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ವಿಚಾರವೂ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಡಿಸಿಎಂ ಸ್ಥಾನಕ್ಕಾಗಿ ಹಲವು ನಾಯಕರು ತೀವ್ರ ಪೈಪೋಟಿ ನಡೆಸುತ್ತಿದ್ದು, ಸಮುದಾಯವಾರು ಶಾಸಕರ ಬೆಂಬಲ ಸೆಳೆಯಲು ಪ್ರತ್ಯೇಕ ಲಾಬಿ ಆರಂಭಿಸಿದ್ದಾರೆ.
ಲಿಂಗಾಯತ ಸಮುದಾಯದ ಬೆಂಬಲ ಪಡೆಯಲು ಈಶ್ವರ್ ಖಂಡ್ರೆ ಅವರು ಲಿಂಗಾಯತ ಶಾಸಕರಿಗೆ ಭೋಜನ ಕೂಟ ಆಯೋಜಿಸಿ ತಮ್ಮ ಪರ ಬೆಂಬಲ ಕೋರಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಎಂ.ಬಿ. ಪಾಟೀಲ್ ಕೂಡ ಲಿಂಗಾಯತ ಶಾಸಕರೊಂದಿಗೆ ಸಂಪರ್ಕ ಸಾಧಿಸಿ ಡಿಸಿಎಂ ಸ್ಥಾನಕ್ಕಾಗಿ ತಮ್ಮ ಪರ ವಾತಾವರಣ ನಿರ್ಮಿಸಲು ಯತ್ನಿಸುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

- Advertisement -spot_img

More articles

- Advertisement -spot_img

Latest article