ಕ್ರಿಕೆಟ್, ಹಾಕಿಯಲ್ಲಿ ಭಾರತದ ಶ್ರೇಷ್ಠ ಪ್ರದರ್ಶನಕ್ಕೆ ಶಹಭಾಷ್ ಹೇಳಿದ ಮೋದಿ

admin
By admin
1 Min Read

ಇತ್ತೀಚೆಗಷ್ಟೆ ಮುಕ್ತಾಯವಾದ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿ ಹಾಗೂ ಜೂನಿಯರ್ ಹಾಕಿ ಕಪ್ ಪಂದ್ಯದಲ್ಲಿ ಅಮೋಘ ಆಟ ಪ್ರದರ್ಶನ ನೀಡಿದ ತಂಡಗಳಿಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಉಭಯ ತಂಡಗಳು ಉತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಎತ್ತಿಕೊಳ್ಳುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಭಾನುವಾರ ಪ್ರಸಾರಗೊಂಡ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಟೀಮ್ ಇಂಡಿಯಾ ತವರಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ದದ 5 ಟೆಸ್ಟ್ ಸರಣಿಯಲ್ಲಿ 4 ಜಯಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡರೆ ಜೂನಿಯರ್ ಹಾಕಿ ಪಂದ್ಯದಲ್ಲಿ ಭಾರತ ತಂಡ 15 ವರ್ಷಗಳ ಬಳಿಕ ಪ್ರಶಸ್ತಿ ಎತ್ತಿಕೊಂಡಿದ್ದಾರೆ. ಈ ಎರಡು ತಂಡಗಳ ಸಾಧನೆ ಕುರಿತು ಮೋದಿ ಸಂತಸ ವ್ಯಕ್ತ ಪಡಿಸಿದ್ದಾರೆ. ಸರಣಿಯಲ್ಲಿ ಯುವ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದು, ಕರುಣ್ ನಾಯರ್ ಅಮೋಘ ತ್ರಿಶತಕ ಬಾರಿಸಿದರೆ, ಕೆ.ಎಲ್ ರಾಹುಲ್ 199 ರನ್ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು ಎಂದರು. ಟೆಸ್ಟ್ ನಾಯಕ ಕೊಹ್ಲಿಯೂ ಸಹ ಶ್ರೇಷ್ಠ ಪ್ರದರ್ಶನ ನೀಡಿ ಸ್ಪೂರ್ತಿದಾಯಕ ನಾಯಕತ್ವ ವಹಿಸಿದ್ದಾರೆ. ಇದೇ ವೇಳೆ ಐಸಿಸಿ ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿ ಪಡೆದ ಆಲ್ ರೌಂಡರ್ ಆರ್ ಅಶ್ವಿನ್ ಅವರಿಗೂ ಕೂಡ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಕನ್ನಡಿಗರಿಗಿಲ್ಲಿದೆ ಶುಭ ಸುದ್ದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೂ ಮೀಸಲಾತಿ

25 ಪೈಸೆಯಿಂದ ಲಕ್ಷಾಧಿಪತಿಯಾದ್ರು..! ಹೇಗೆ ಗೊತ್ತಾ..?

ಯುವತಿಯನ್ನು ನುಂಗಿದ ಮೊಸಳೆ..! ಅದರ ಅಸಲಿ ಕಥೆ ಏನು ಗೊತ್ತಾ..?

ಡ್ರೆಸ್ ಬಗ್ಗೆ ಕಮೆಂಟ್: ಗಂಡನ ಎದುರೆ ನಡೀತು ಪತ್ನಿಗೆ ಹಲ್ಲೆ..!

ಆವಲಬೆಟ್ಟ ಫೇಮಸ್ ಸ್ಪಾಟ್‍ಗೆ ಭೇಟಿ ಮಾಡೋಕು ಮುನ್ನ ಈ ಸ್ಟೋರಿ ಓದಿ..!

ಮೋದಿಗೆ ಪತ್ರ ಬರೆದು ಜಿಲ್ಲಾಡಳಿತಕ್ಕೆ ಶಾಕ್ ಕೊಟ್ಟ ನಮನ.! ಪತ್ರದಲ್ಲೇನಿತ್ತು.?

ಗುಡ್‍ನ್ಯೂಸ್ : ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ 4 ಲಕ್ಷಕ್ಕೆ .?

Share This Article