No menu items!
11.1 C
Munich
Monday, September 7, 2026

ಕರ್ನಾಟಕದಲ್ಲಿ ಮುಂಗಾರು ದುರ್ಬಲ; ಸೆ.7, 8ರಂದು ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, 40 ಕಿ.ಮೀ ವೇಗದ ಗಾಳಿಗೂ ಮುನ್ಸೂಚನೆ

Must read

ಕರ್ನಾಟಕದಲ್ಲಿ ಮುಂಗಾರು ದುರ್ಬಲ; ಸೆ.7, 8ರಂದು ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, 40 ಕಿ.ಮೀ ವೇಗದ ಗಾಳಿಗೂ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದರೂ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ 4 ಸೆಂ.ಮೀ, ಯಾದಗಿರಿ ಜಿಲ್ಲೆಯ ಕಕ್ಕೇರಿಯಲ್ಲಿ 3 ಸೆಂ.ಮೀ ಮಳೆಯಾಗಿದ್ದು, ಹುಣಸಗಿ, ಗದಗ ಹಾಗೂ ತೀರ್ಥಹಳ್ಳಿಯಲ್ಲಿ ತಲಾ 1 ಸೆಂ.ಮೀ ಮಳೆ ದಾಖಲಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಸೆಪ್ಟೆಂಬರ್ 7ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಇದೇ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸಬಹುದು.
ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.
ಸೆಪ್ಟೆಂಬರ್ 8ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ.
ಅದೇ ದಿನ ಚಾಮರಾಜನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -spot_img

More articles

- Advertisement -spot_img

Latest article