Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Date:

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

ಬೆಂಗಳೂರು: ರಾಜ್ಯದೆಲ್ಲೆಡೆ, ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪ ದರವನ್ನು ನಿಗದಿ ಮಾಡುವಂತೆ ಸರ್ಕಾರ ಇಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಇನ್ಮುಂದೆ ರಾಜ್ಯದ ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ, ಎಲ್ಲಾ ಭಾಷಯ ಚಿತ್ರಗಳಿಗೆ ಹಾಗೂ ಎಲ್ಲಾ ಪ್ರದರ್ಶನಕ್ಕೆ ಎಲ್ಲಾ ರೀತಿಯ ತೆರಿಗೆ ಹೊರತುಪಡಿಸಿ ಟಿಕೆಟ್‌ ದರ  200 ರೂ. ಮೀರದಂತೆ ಆದೇಶದಲ್ಲಿ ತಿಳಿಸಿದೆ. 75 ಆಸನಗಳು ಅಥವಾ ಅದಕ್ಕಿಂತ ಕಡಿಮೆ ಆಸನಗಳ ಪ್ರಿಮಿಯಂ ಸೌಲಭ್ಯವಿರುವ ಬಹುಪರದೆ ಚಿತ್ರ ಮಂದಿರಗಳನ್ನು ನಿಗದಿಪಡಿಸಿರುವ 200 ರೂ.ಗಳ ಗರಿಷ್ಠ ಟಿಕೆಟ್‌ ದರ ಮಿತಿಯಿಂದ ಹೊರಗಿಟ್ಟಿದೆ. ಹೊಸ ಆದೇಶವು ಇಂದಿನಿಂದಲೇ ಅನ್ವಯ ಆಗಲಿದೆ. ಇದರ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ನಲ್ಲಿ ಟಿಕೆಟ್​ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ. ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ಆಗಲಿದೆ. ಇದು ಪ್ರೇಕ್ಷಕ ನಿಟ್ಟುಸಿರು ಬಿಡುವಂತೆ ಮಾಡಿದೆ.

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...